Advertisement
ಹಂಪಿ ಬಳಿಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಎದುರು ಪ್ರವಾಸೋದ್ಯಮ ಇಲಾಖೆಯಿಂದ ತ್ರೀಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸಿಎಎ ಹೋರಾಟ ಹಾಗೂ ಹಿಜಾಬ್ ಪ್ರಕರಣದಲ್ಲೂ ಮುಸ್ಲಿಮರನ್ನು ಹಾದಿ ತಪ್ಪಿಸಲಾಗಿದೆ. ದೇಶದ ಸಂವಿಧಾನದಂತೆ ಎಲ್ಲರೂ ನಡೆದುಕೊಳ್ಳಬೇಕು. ಸಂವಿಧಾನಕ್ಕೆ ಎಲ್ಲರೂ ಗೌರವ ನೀಡಬೇಕು. ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣದಲ್ಲೂ ಕೆಲ ಬುದ್ಧಿವಂತ ನಾಯಕರು ಪ್ರಚೋದನೆ ನೀಡಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣವನ್ನು ಕಾಂಗ್ರೆಸ್‌ನವರು ಮಾಡಬಾರದು ಎಂದರು.
Related Articles
Advertisement
ವಿಜಯನಗರ ಕ್ಷೇತ್ರದಲ್ಲಿ ಮಾಜಿ ಸಚಿವ ಎಚ್. ಆರ್. ಗವಿಯಪ್ಪನವರು ಪಕ್ಷ ಬಿಡುವ ವಿಚಾರ ನನ್ನ ಗಮನಕ್ಕೂ ಬಂದಿದೆ. ಆದರೆ ಅವರು ನನಗೆ ನೇರವಾಗಿ ಹೇಳಿಲ್ಲ. ಉಪ ಚುನಾವಣೆ ವೇಳೆ ಅವರು ಟಿಕೆಟ್ ಕೇಳಿದ್ದರೂ ಮುಂದೆ ಕೊಡುತ್ತೇವೆ ಎಂದು ಆಗಿನ ಸಿಎಂ ಬಿ.ಎಸ್. ಯಡಿಯೂರಪ್ಪನವರು ಮಾತು ಕೊಟ್ಟಿದ್ದರು. ಈಗ ಅವರು ಪಕ್ಷ ಬಿಡುತ್ತಿದ್ದಾರೆ. ಆದರೆ ನಾನು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ. ನಾಲ್ಕು ಬಾರಿ ಕ್ಷೇತ್ರದ ಜನ ನನಗೆ ಮತ ನೀಡಿ ಗೆಲ್ಲಿಸಿದ್ದಾರೆ. ಶಾಸಕರನ್ನಾಗಿ ಮಾಡಿದ್ದಾರೆ ಎಂದರು.
ವಿಜಯನಗರದ ಜನ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ದಶಕಗಳ ಕೂಗಿಗೆ ಧ್ವನಿಗೂಡಿಸಿ ವಿಜಯನಗರ ಜಿಲ್ಲೆ ಮಾಡಿಸಿರುವೆ. ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲು ಜನ ಮುಂದೆಯೂ ನನ್ನ ಜತೆಗಿರಲಿದ್ದಾರೆ ಎಂಬ ವಿಶ್ವಾಸ ಇದೆ ಎಂದರು.
ಹಂಪಿ ಪ್ರದೇಶದ ಆನೆಗೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇನ್ನೂ 20 ದಿನದೊಳಗೆ ಆಗಮಿಸಲಿದ್ದಾರೆ. ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹಾಗಾಗಿ ಶೀಘ್ರವೇ ಆನೆಗೊಂದಿಗೆ ತೆರಳಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲಿಸುವೆ ಎಂದರು.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲೂ 10 ಸಾವಿರ ಜನಕ್ಕೆ ನಿವೇಶನದ ಪಟ್ಟಾ ನೀಡಲಾಗುವುದು. ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಪಟ್ಟಾ ವಿತರಣೆ ಮಾಡಲಾಗುವುದು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪಟ್ಟಾ ವಿತರಣೆ ಮಾಡಲಿದ್ದಾರೆ. ವಿಜಯನಗರ ಭಾಗದಲ್ಲೂ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು. ಕಮಲಾಪುರ ಪಪಂ ಅಧ್ಯಕ್ಷ ಸಯ್ಯದ್ ಅಮಾನುಲ್ಲಾ ಇದ್ದರು.