ಜಗಳೂರು: ರೈತರು ಅ ಧಿಕ ಇಳುವರಿ ಕೊಡುವ ತಳಿಗಳನ್ನು ಬಳಸುವುದರ ಜೊತೆಗೆ ಆಧುನಿಕ ತಂತ್ರಜ್ಞಾನ ಬಳಸುವುದರಿಂದ ಅಧಿಕ ಇಳುವರಿ ಪಡೆಯಬಹುದು ಎಂದು ದಾವಣಗೆರೆಯ ಉಪ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ಹೇಳಿದರು.
ತಾಲೂಕಿನ ಕಲ್ಲೇದೇವರಪುರ ಗ್ರಾಮದಲ್ಲಿ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಹಾಗೂ ಕೃಷಿ ಇಲಾಖೆ ಜಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿ ಕಡಲೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಇಲಾಖೆ ನೀಡುವಂತಹ ತರಬೇತಿಗಳಲ್ಲಿ ರೈತರು ಭಾಗವಹಿಸುವುದರಿಂದ ಉಪಯುಕ್ತ ಮಾಹಿತಿ ದೊರೆಯಲಿದೆ. ಆಗ ರೈತರು ಬಿತ್ತನೆ ಮಾಡಿ ಉತ್ತಮ ಇಳುವರಿ ಪಡೆಯಬಹುದು ಎಂದರು.
ಕೇಂದ್ರದ ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ್ ಮಾತನಾಡಿ, ಕಡಲೆಯಲ್ಲಿ ಅಧಿಕ ಇಳುವರಿ ಕೊಡುವ ತಳಿಗಳಾದ ಜೈಕಾ 9218 ಅನ್ನು ಜೈವಿಕ ಗೊಬ್ಬರಗಳಾದ ರೈಜೋಬಿಯಂ ಹಾಗೂ ರಂಜಕ ಕರಗಿಸುವ ಗೊಬ್ಬರದಿಂದ 500 ಗ್ರಾಂ ಪ್ರತಿ ಎಕರೆಗೆ ಬೀಜೋಪಚಾರ ಮಾಡಬೇಕು. ನಂತರ ಬಿತ್ತನೆ ಮಾಡುವುದರಿಂದ ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಮಾಡಬಹುದು ಎಂದು ತಿಳಿಸಿದರು.
ಮಣ್ಣು ವಿಜ್ಞಾನಿಗಳಾದ ಎಚ್.ಎಂ. ಸಣ್ಣಗೌಡರು, ಕೇಂದ್ರದ ಮುಖ್ಯಸ್ಥ ಡಾ| ದೇವರಾಜ್, ಸಹಾಯಕ ಕೃಷಿ ನಿರ್ದೇಶಕ ಶ್ರೀನಿವಾಸಲು, ಸಿಬ್ಬಂದಿಗಳಾದ ಚಂದ್ರಶೇಖರ, ರೇಣುಕುಮಾರ್, ಆತ್ಮ ಯೋಜನೆ ಅಧಿ ಕಾರಿಗಳು ಹಾಗೂ ಕಲ್ಲೇದೇವರಪುರ ಗ್ರಾಮದ ಪ್ರಗತಿಪರ ರೈತರುತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.