Advertisement

ಪರಿಶಿಷ್ಟರ ಹಣ ಗ್ಯಾರಂಟಿಗೆ ಬಳಕೆ: ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ

11:34 PM Feb 23, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರ ಪರಿಶಿಷ್ಟ ಜಾತಿ/ ಪಂಗಡಕ್ಕೆ ಮೀಸಲಾಗಿದ್ದ ಎಸ್ಸಿಪಿ/ಟಿಎಸ್ಪಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳುವ ಮೂಲಕ ದಲಿತ ವಿರೋಧಿ ನೀತಿ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

Advertisement

ಮೈಸೂರು ನಗರದ ಜಿಲ್ಲಾ ಪಂಚಾಯತ್‌ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ದಲಿತರಿಗೆ ಮೀಸಲಾದ ವಿವಿಧ ಯೋಜನೆಗಳ 14,482 ಕೋ. ರೂ. ಅನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳುವ ಮೂಲಕ ಶೋಷಿತ ಸಮುದಾಯಕ್ಕೆ ವಂಚನೆ ಎಸಗಿದೆ ಎಂದು ಆರೋಪಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ರಾಮನಗರದ‌ಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು, ಸ್ವಲ್ಪ ಹೊತ್ತು ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು. ಮಂಡ್ಯ ನಗರದ ಜಿಲ್ಲಾಧಿ ಕಾರಿ ಕಚೇರಿ ಮುಂದೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು. ಕೋಲಾರ‌¤ದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದ ಎಸ್‌.ಮುನಿಸ್ವಾಮಿ ಪಾಲ್ಗೊಂಡರು.

ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ, ಮಾಜಿ ಶಾಸಕ ಅರುಣ ಶಹಪುರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಶಿರಸಿ ಸಹಿತ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next