Advertisement

ಎಸ್‌ಸಿಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಸಿ

06:44 PM Aug 28, 2020 | Suhan S |

ಕೊಪ್ಪಳ: ವಿವಿಧ ಇಲಾಖೆಗಳಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುವ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಿಗದಿತ ಅವಧಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಿ ಎಂದು ಜಿಲ್ಲಾಧಿಕಾರಿಗೆ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಪಂ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಪರಿಶಿಷ್ಟ ಜಾತಿ, ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಇಲಾಖೆಗಳು ಸೂಕ್ತ ರೀತಿಯಲ್ಲಿ ಯೋಜನೆ ರೂಪಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಬಿಡುಗಡೆಯಾದ ಅನುದಾನವನ್ನು ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ, ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇದುವರೆಗೆ ಬಾಕಿ ಉಳಿದ ಹಾಗೂ ಬಳಕೆ ಆಗದ ಅನುದಾನದ ಕುರಿತು ಸೂಕ್ತ ಕಾರಣಗಳೊಂದಿಗೆ ಅಧಿಕಾರಿಗಳು ಮಾಹಿತಿ ನೀಡಬೇಕು. ಅನುದಾನ ಬಳಕೆಯಾದ ವರ್ಷ, ತಿಂಗಳು, ದಿನಾಂಕ ಸಹಿತ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ವರದಿ ನೀಡಬೇಕು. ಅಧಿಕಾರಿಗಳು ಸಭೆಗೆ ಬರುವಾಗ ತಮ್ಮ ಇಲಾಖೆಗಳ ಸಂಪೂರ್ಣ ಮಾಹಿತಿಯೊಂದಿಗೆ ಬರಬೇಕು ಎಂದರು.

ಸಕಾಲದಲ್ಲಿ ಅರ್ಜಿ ಕರೆದು ಪಾರದರ್ಶಕತೆಯಿಂದ ಫಲಾನುಭವಿ ಆಯ್ಕೆ ಮಾಡಬೇಕು. ವಿವಿಧ ಯೋಜನೆಯಲ್ಲಿ ನೀಡುವ ಪರಿಕರಗಳಾಗಲಿ, ಇನ್ನಿತರ ಯಾವುದೇ ಯೋಜನೆಗಳ ಸೌಲಭ್ಯಗಳಾಗಲಿ ಗುಣಮಟ್ಟದಿಂದ ಕೂಡಿರಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಜಿಲ್ಲೆಯ ಆಸ್ಪತ್ರೆಗಳಲ್ಲಿ ಅವಶ್ಯವಿರುವ ಆಕ್ಸಿಜನ್‌ ವ್ಯವಸ್ಥೆಯನ್ನು ಪೂರ್ಣಗೊಳಿಸಲು ಅಗತ್ಯ ಪ್ರಮಾಣದ ಆಕ್ಸಿಜನ್‌ ಸರಬರಾಜಿನ ಅವಶ್ಯಕತೆಯಿದೆ. ನಮ್ಮ ಜಿಲ್ಲೆಯಲ್ಲಿಯೇ ಆಕ್ಸಿಜನ್‌ ಪ್ಲಾಂಟ್‌ ಇದ್ದು, ಅಲ್ಲಿಂದ ಬೇರೆ ಜಿಲ್ಲೆಗಳಿಗೆ ಆಕ್ಸಿಜನ್‌ ಪೂರೈಕೆಯಾಗುತ್ತಿದೆ. ನಮ್ಮ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸೌಲಭ್ಯದ ಕೊರತೆಯಾಗದಂತೆ ಸಂಬಂಧಿ  ಸಿದ ಇಲಾಖೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಜಿಲ್ಲೆಯ ಎಲ್ಲ ಆಸ್ಪತ್ರೆಗಳಿಗೆ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಒದಗಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ರಘುನಂದನ್‌ ಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷ ¾ಣ ಬಬಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next