ಕೊಪ್ಪಳ: ವಿವಿಧ ಇಲಾಖೆಗಳಿಗೆ ಎಸ್‌ಸಿಪಿ, ಟಿಎಸ್‌ಪಿಯಡಿ ನೀಡಲಾಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದರಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಲಾಗುವ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಬೇಕು. ಈ ಯೋಜನೆಯಡಿ ಯಾವ ಯಾವ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಬಂದಿದೆ ಹಾಗೂ ಬಂದಿರುವ ಅನುದಾನವನ್ನು ಯಾವ ಯಾವ ಉದ್ದೇಶಗಳಿಗೆ ವೆಚ್ಚ ಮಾಡಲಾಗಿದೆ ಎಂಬುವುದರ ಬಗ್ಗೆ ವರದಿ ಸಲ್ಲಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ರುದ್ರಭೂಮಿ ಸಮಸ್ಯೆಗಳನ್ನು ನಿವಾರಣೆ ಮಾಡಿ. ಗಂಗಾ ಕಲ್ಯಾಣ ಯೋಜನೆಯಡಿ ಕೃಷಿಕರಿಗೆ ಬೋರ್‌ವೆಲ್ ಸೌಲಭ್ಯಗಳನ್ನು ತ್ವರಿತವಾಗಿ ನೀಡಿ, ಅಗತ್ಯ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು. ಎಸ್‌ಸಿ, ಎಸ್‌ಟಿ ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳ ವ್ಯವಸ್ಥೆಯು ಅಚ್ಚುಕಟ್ಟಾಗಿರಬೇಕು. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಅ ಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.
2018-19ನೇ ಸಾಲಿನ ಹಾಗೂ ಇತರೆ ಹಿಂದಿನ ಸಾಲಿನ ಯಾವುದೇ ಯೋಜನೆಗಳ ಸೌಲಭ್ಯಗಳು ಬಾಕಿ ಉಳಿಯದಿರಲಿ. ಅಲ್ಲದೇ ಪ್ರಸಕ್ತ ಸಾಲಿನ ಕಾರ್ಯಕ್ರಮಗಳಲ್ಲೂ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಶೀಘ್ರ ಸೌಲಭ್ಯ ಕಲ್ಪಿಸುವಂತೆ ಸಂಬಂ ಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಹಾಗೂ ಇತರೇ ಇಂಜನಿಯರಿಂಗ್ ಸಂಸ್ಥೆಗಳಿಂದ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ಸ್ಥಿತಿಗಳ ಬಗ್ಗೆ ಮಾಹಿತಿ ಪಡೆಯಲು ಲೋಕೋಪಯೋಗಿ ಇಲಾಖೆ ಅ ಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ದುರಸ್ತಿ ಅವಶ್ಯವಿದ್ದಲ್ಲಿ ಅವುಗಳನ್ನು ಸರಿಪಡಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆಸಂಬಂಧಿಸಿದಂತೆ ಭೂಸ್ವಾ ಧೀನ ಪ್ರಕ್ರಿಯೆ ವರದಿಯನ್ನು ಜಿಲ್ಲಾ ಧಿಕಾರಿಗೆ ಸಲ್ಲಿಸಬೇಕು. ಭೂಸ್ವಾ ಧೀನ ಪ್ರಕ್ರಿಯೆಗೆ ಸಂಬಂ ಧಿಸಿದ ಅನುದಾನವನ್ನು ರಾಜ್ಯ ಸರ್ಕಾರದಿಂದ ಮಂಜೂರಿ ಮಾಡಲಾಗುವುದು ಎಂದರು.
ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ತಾಲೂಕಿನ ಹಿರೇಬಗನಾಳದಿಂದ ಕಾಸನಕಂಡಿವರೆಗೆ ಕಾಂಕ್ರೀಟ್ ರಸ್ತೆಯಾಗಬೇಕಾಗಿದೆ. ಈ ಭಾಗವು ಕೈಗಾರಿಕಾ ಪ್ರದೇಶದಿಂದ ಕೂಡಿದ್ದು, ಇಲ್ಲಿ ಭಾರೀ ವಾಹನಗಳ ಸಂಚಾರ ಹೆಚ್ಚಿದೆ. ಆದ್ದರಿಂದ ಇಲ್ಲಿ ಸಿಸಿ ರಸ್ತೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈ ರಸ್ತೆ ಎಷ್ಟು ಕಿ.ಮೀ. ಇದೆ. ಯೋಜನೆ ಅಂದಾಜು ಮೊತ್ತ ಎಷ್ಟಾಗಲಿದೆ ಎಂಬುವುದರ ಕುರಿತು ನಕಾಶೆ ತಯಾರಿಸಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಂಸದ ಕರಡಿ ಸಂಗಣ್ಣ, ಜಿಲ್ಲಾ ಧಿಕಾರಿ ಪಿ. ಸುನೀಲಕುಮಾರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಎಸ್‌ಪಿ ಜಿ. ಸಂಗೀತಾ, ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರು, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ತಾಪಂ ಅಧ್ಯಕ್ಷ ಬಾಲಚಂದ್ರನ್ ಸೇರಿದಂತೆ ವಿವಿಧ ಇಲಾಖೆಗಳ ಅ ಧಿಕಾರಿಗಳು ಉಪಸ್ಥಿತರಿದ್ದರು.