Advertisement
ಕಂಕನಾಡಿ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಕಲಿಕೆ ನಿರಂತರವಾಗಿದ್ದು,ಸ್ಪರ್ಧಾ ತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರತಿದಿನದ ಆಗುಹೋಗುಗಳನ್ನು ತಿಳಿದುಕೊಂಡಿರಬೇಕು.ವೈದ್ಯಕೀಯ ಕ್ಷೇತ್ರದಲ್ಲಿ ಪ್ರತಿದಿನದ ಕಲಿಕೆ ತೀರಾ ಆವಶ್ಯವೂ ಆಗಿದೆ. ವೈದ್ಯರು ತಮ್ಮಿಂದ ಚಿಕಿತ್ಸೆ ಪಡೆದುಕೊಳ್ಳುವ ರೋಗಿಗಳಿಂದಲೂ ಹೆಚ್ಚಾಗಿ ನಿರಂತರವಾಗಿ ಕಲಿಯುತ್ತಿರಬೇಕು ಎಂದವರು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ, ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಅಧ್ಯಕ್ಷ ವಂ| ಡಾ| ಪೀಟರ್ ಪಾವ್ ಸಲ್ಡಾನ್ಹಾ ಮಾತನಾಡಿ, ದೇವರು ನಮಗೆ ಶಕ್ತಿ ಮತ್ತು ಸಾಮರ್ಥ್ಯವನ್ನು ಕರುಣಿಸಿದ್ದಾನೆ. ಜ್ಞಾನದ ಹಸಿವು ನೀಗಿಸಿ ಜೀವನದಲ್ಲಿ ಯಶಸ್ಸಿನ ಮೈಲಿಗಲ್ಲು ಸ್ಥಾಪಿಸಲು ಈ ಶಕ್ತಿ ಮತ್ತು ಸಾಮರ್ಥ್ಯದ ಬಳಕೆಯಾಗಬೇಕು. ಹೋಮಿಯೋಪಥಿ ಕ್ಷೇತ್ರ ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಮನ್ನಣೆ ಪಡೆಯುತ್ತಿರುವುದರಿಂದ ವೈದ್ಯರಿಗೆ ಅವಕಾಶಗಳು ಹೆಚ್ಚಿವೆ ಎಂದರು. ಆಡಳಿತಾಧಿಕಾರಿ ವಂ| ವಿನ್ಸೆಂಟ್ ಸಲ್ಡಾನ್ಹಾ, ವಂ| ಸಿಲ್ವೆಸ್ಟರ್ ವಿ. ಲೋಬೋ, ಕಾಲೇಜು ಉಪ ಪ್ರಾಂಶುಪಾಲ ಡಾ| ಇ.ಎಸ್.ಜೆ. ಪ್ರಭು ಕಿರಣ್, ಡಾ| ಗಿರೀಶ್ ನಾವಡ, ಕಾರ್ಯಕ್ರಮ ಸಂಯೋಜಕಿ ಡಾ| ವಿಲ್ಮಾ ಡಿ’ಸೋಜಾ ಉಪಸ್ಥಿತರಿದ್ದರು.
Related Articles
Advertisement
ಸಮ್ಮಾನ 73 ಮಂದಿ ಹೋಮಿಯೋಪಥಿ ಪದವೀಧರರು, 27 ಮಂದಿ ಹೋಮಿಯೋಪಥಿ ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನಿಸಲಾಯಿತು. ರಾಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ನಡೆಸಿದ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿ ಪಡೆದ, ವಿ.ವಿ. ಘೋಷಿಸುವ ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಮುಖ್ಯ ಅತಿಥಿ ಡಾ| ಎಸ್. ಸಚ್ಚಿದಾನಂದ ಅವರನ್ನು ಸಮ್ಮಾನಿಸಲಾಯಿತು.