Advertisement

ದಮನಿತ ಮಹಿಳೆಯರು’ಎಂಬ ಪದ ಬಳಸಿ: ಸಚಿವೆ 

06:15 AM Jun 12, 2018 | |

ಬೆಂಗಳೂರು: “ಸೆಕ್ಸ್‌ ವರ್ಕರ್ಸ್‌ ಪದಕ್ಕೆ ಪರ್ಯಾಯವಾಗಿ ಇನ್ಮುಂದೆ ದಮನಿತ ಮಹಿಳೆಯರು’ ಎಂದು ಕರೆಯುವಂತೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಅಧಿಕಾರಿಗಳಿಗೆ
ಸೂಚಿಸಿದರು.

Advertisement

ಸಚಿವರಾದ ನಂತರ ಪ್ರಥಮ ಬಾರಿಗೆ ಸೋಮವಾರ ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸೆಕ್ಸ್‌ ವರ್ಕರ್ಸ್‌ ಎಂಬ ಪದ ಬಳಕೆ ಒಂದು ರೀತಿಯಲ್ಲಿ ಅವಮಾನಕರ ಎಂಬಂತಿದೆ. ಹೀಗಾಗಿ, ದಮನಿತ ಮಹಿಳೆಯರು ಎಂದು ಬಳಕೆ ಮಾಡಿ ಎಂದು ನಿರ್ದೇಶನ ನೀಡಿದರು. 

ಮುಂದಿನ ಐದು ವರ್ಷಗಳಲ್ಲಿ ಮಹಿಳೆಯರು ಹಾಗೂ ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ಯೋಜನೆಗಳನ್ನು ರೂಪಿಸುವ ಬಗ್ಗೆ ಕಾರ್ಯಯೋಜನೆ ನೀಡಿ ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಅವರು,ಕಲಾವಿದರ ಮಾಸಾಶನ ಹೆಚ್ಚಳ ಮಾಡುವ ಬಗ್ಗೆಯೂ ಪ್ರಸ್ತಾವನೆ ಸಿದ್ಧಪಡಿಸುವಂತೆ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಚಕ್ರವರ್ತಿ ಮೋಹನ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 
ಇಲಾಖೆಯ ನಿರ್ದೇಶಕಿ ದೀಪಾ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next