Advertisement

ನೀರು ಮಿತವಾಗಿ ಬಳಸಿ

01:24 AM Apr 12, 2019 | Team Udayavani |

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ನೇತ್ರಾವತಿ ನದಿಯಿಂದ ಪೂರೈಕೆ ಮಾಡಲಾಗುತ್ತಿದ್ದು, ಪ್ರಸ್ತುತ ನದಿಯಲ್ಲಿ ಫೆಬ್ರವರಿ ತಿಂಗಳಿನಿಂದಲೇ ನೀರಿನ ಒಳ ಹರಿವು ಸಂಪೂರ್ಣ ಸ್ಥಗಿತಗೊಂಡಿದೆ. ಬುಧವಾರ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ 5.80 ಮೀ. ಮಾತ್ರ ಲಭ್ಯವಿದ್ದು, ಮಳೆಗಾಲ ಪ್ರಾರಂಭವಾಗುವ ವರೆಗೆ ನೀರನ್ನು ಸಮರ್ಪಕವಾಗಿ ಬಳಸಿ ವಿತರಣೆ ಮಾಡಬೇಕಾಗಿರುತ್ತದೆ.

Advertisement

ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದೆಂದು ಮುಂದಿನ ದಿನಗಳಲ್ಲಿ 4 ದಿನಗಳ ಒಟ್ಟು 96 ಗಂಟೆಗಳ ಅವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ನೀರನ್ನು ಸರಬರಾಜನ್ನು ಮಾಡಲಾಗುವುದು. ಅನಂತರ 48 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಸದ್ರಿ ವ್ಯವಸ್ಥೆಯು ತಾತ್ಕಾಲಿಕವಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬಂದು ನದಿಯಲ್ಲಿ ಒಳಹರಿವು ಕಂಡು ಬಂದಲ್ಲಿ ನೀರನ್ನು ಈ ಹಿಂದಿನಂತೆಯೇ ಪೂರೈಕೆ ಮಾಡಲಾಗುವುದು. ಹಾಗಾಗಿ ಸಾರ್ವಜನಿಕರು ತಮ್ಮ ಮನೆಗಳಲ್ಲಿನ ಕೈತೋಟಗಳಿಗೆ, ವಾಹನ ತೊಳೆಯಲು ಮತ್ತು ಇನ್ನಿತರ ಕೆಲಸಗಳಿಗೆ ಕುಡಿಯುವ ನೀರನ್ನು ಬಳಸಬಾರದು ಮತ್ತು ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಬೇಕು.

ತಗ್ಗು ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಪೂರೈಕೆಯಾಗುತ್ತಿರುವ ಬಳಕೆದಾರರು ಕುಡಿಯುವ ನೀರನ್ನು ಮಿತವಾಗಿ ಬಳಸಿ ಆವಶ್ಯಕತೆ ಇದ್ದಷ್ಟನ್ನೇ ಉಪಯೋಗಿಸಿ ತಮ್ಮ ಮನೆಯ ಗೇಟ್‌ ವಾಲ್‌Ìಗಳನ್ನು ಬಂದ್‌ ಮಾಡಿ ಎತ್ತರದ ಪ್ರದೇಶದಲ್ಲಿನ ಸಾರ್ವಜನಿಕರಿಗೆ ನೀರು ಪೂರೈಕೆಯಾಗುವಂತೆ ಸಹಕರಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next