Advertisement
ಬೀಟ್ ರೂಟ್ ಕೂಡ ಮಣ್ಣಿನ ಅಡಿಯಲ್ಲಿ ಸಿಗುವ ತರಕಾರಿಯಾಗಿದ್ದು, ಅದ್ಭುತವಾದ ತರಕಾರಿ ಎಂದೇ ಹೇಳಬಹುದು. ಬೀಟ್ ರೂಟ್ ನಲ್ಲಿ ಹಲವಾರು ವಿಧದ ವಿಟಮಿನ್, ಖನಿಜಾಂಶಗಳಿವೆ. ಸಾಕಷ್ಟು ಜನ ಬೀಟ್ ರೂಟ್ ನೋಡಿದ ಕೂಡಲೇ, ಅದರ ಬಣ್ಣವನ್ನು ನೋಡಿದ ಕೂಡಲೇ ಮೂಗು ಮುರಿಯುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಇದರ ಪರಿಣಾಮ ಹಾಗೂ ಉಪಯೋಗವನ್ನು ತಿಳಿಯುತ್ತಿರುವ ಜನರು, ಬೀಟ್ ರೂಟ್ ಜ್ಯೂಸ್ ಹಾಗೂ ಸಲಾಡ್ ಗಳತ್ತ ಮುಖ ಮಾಡುತ್ತಿದ್ದಾರೆ.
Related Articles
Advertisement
ದೈನಂದಿನ ಕಾರ್ಯಕ್ಕೆ ಶಕ್ತಿ : ಪ್ರತಿನಿತ್ಯವೂ ಬೀಟ್ ರೂಟ್ ಜ್ಯೂಸ್ ಕುಡಿದರೆ ಅದು ದೈನಂದಿನ ಕಾರ್ಯಕ್ಕೆ ಶಕ್ತಿ ನೀಡುವುದು ಮತ್ತು ದೀರ್ಘಕಾಲ ದೈಹಿಕ ಚಟುವಟಿಕೆಯನ್ನು ದಣಿವಿಲ್ಲದೆ ಮಾಡಬಹುದಾಗಿದೆ.
ಬೀಟ್ ರೂಟ್ ಜ್ಯೂಸ್ ನ್ನು ನಿತ್ಯವೂ ಕುಡಿದರೆ ಅದರಿಂದ ವಯಸ್ಸಾಗುವ ಲಕ್ಷಣಗಳನ್ನು ತಡೆಯಬಹುದಾಗಿದೆ. ಬೀಟ್ ರೂಟ್ ನಲ್ಲಿ ಇರುವಂತಹ ಫಾಲಟೆ ಅಂಶವು ಈ ಕಾರ್ಯಕ್ಕೆ ಕಾರಣವಾಗಿದೆ. ಇದು ಚರ್ಮದ ಸಮಸ್ಯೆ ಮತ್ತು ನೆರಿಗೆ ವಿರುದ್ಧ ಹೋರಾಡುವುದು ಮಾತ್ರವಲ್ಲದೆ ಚರ್ಮಕ್ಕೆ ಪುನಶ್ಚೇತನ ನೀಡುವುದು. ನಿಯಮಿತವಾಗಿ ಬೀಟ್ ರೂಟ್ ಜ್ಯೂಸ್ ಕುಡಿದರೆ ಅದರಿಂದ ಆರೋಗ್ಯಕಾರಿ ಮತ್ತು ಕಾಂತಿಯುತ ಚರ್ಮ ಪಡೆಯಬಹುದು.
ಮಧುಮೇಹ ನಿವಾರಣೆ : ಸಾಮಾನ್ಯವಾಗಿ ಮಧುಮೇಹದಿಂದ ಬಳಲುತ್ತಿರುವವರು ಬೀಟ್ ರೂಟ್ ಸೇವನೆ ಮಾಡಲು ಹಿಂದೇಟು ಹಾಕುತ್ತಾರೆ. ಹಾಗೆಂದು ಬೀಟ್ರೂಟನ್ನೇ ಸೇವನೆ ಮಾಡದೆ ಸಂಪೂರ್ಣವಾಗಿ ನಿಯಂತ್ರಿಸಬಾರದು. ಮಧುಮೇಹದಿಂದ ಬಳಲುತ್ತಿರುವವರೂ ಕೂಡ ಮಧ್ಯಮ ಪ್ರಮಾಣದಲ್ಲಿ ಸೇವನೆ ಮಾಡಬಹುದಾಗಿದೆ.
ಬೀಟ್ ರೂಟ್ ಜ್ಯೂಸ್ ಕೂದಲಿನ ಕಾಂತಿ ಮತ್ತು ಹೊಳಪವನ್ನು ಕಾಪಾಡಿಕೊಂಡು ಸಂಪೂರ್ಣ ಆರೋಗ್ಯ ಕಾಪಾಡುವುದು. ನೈಸರ್ಗಿಕವಾಗಿ ಸೌಂದರ್ಯ ಪಡೆಯಲು ನೀವು ಕೂದಲಿಗೆ ಕೂಡ ಬೀಟ್ ರೂಟ್ ಬಳಸಬಹುದು. ಬೀಟ್ ರೂಟ್ ಕೂದಲಿನ ಗುಣಮಟ್ಟವನ್ನು ತುಂಬಾ ಚೆನ್ನಾಗಿ ಕಾಪಾಡಿಕೊಳ್ಳುವುದು.
ಕಾಂತಿಯುತ ಕೂದಲು : ಒಣ ತಲೆಬುರುಡೆ, ಕೂದಲು ಉದುರುವಿಕೆ ಮತ್ತು ಕಾಂತಿಯುತ ಕೂದಲು ಪಡೆಯಲು ನೀವು ಬೀಟ್ ರೂಟ್ ಜ್ಯೂಸ್ ಬಳಸಿ. ಬೀಟ್ ರೂಟ್ ಜ್ಯೂಸ್ ಗೆ ಸ್ವಲ್ಪ ಶುಂಠಿ ಹಾಕಿ ಕುಡಿದರೆ ಆಗ ಕೂದಲು ಉದುರುವಿಕೆ ಸಮಸ್ಯೆ ನಿವಾರಣೆ ಮಾಡಬಹುದು. ಬೀಟ್ ರೂಟ್ ಜ್ಯೂಸ್ ಗೆ ವಿನೇಗರ್ ಹಾಕಿದರೆ ಆಗ ಒಣ ತಲೆಬುರುಡೆ ಸಮಸ್ಯೆ ನಿವಾರಣೆಯಾಗುತ್ತದೆ.
ಬೊಜ್ಜು ಮತ್ತು ಕ್ಯಾನ್ಸರ್ ನಿವಾರಣೆ : ದೀರ್ಘಕಾಲದ ಉರಿಯೂತ, ಪಿತ್ತಜನಕಾಂಗ ಸಂಬಂಧಿಸಿದ ಕಾಯಿಲೆಗಳು, ಬೊಜ್ಜು ಮತ್ತು ಕ್ಯಾನ್ಸರ್ ನಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗೂ ಈ ಬೀಟ್ ರೂಟ್ ಸಾಕಷ್ಟು ಉಪಯೋಗಗಳನ್ನು ನೀಡಬಲ್ಲದು.
ರಕ್ತಹೀನತೆ, ರಕ್ತದ ಶುದ್ಧೀಕರಣ, ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಹಲ್ಲುಗಳ ಸಮಸ್ಯೆಗಳನ್ನೂ ದೂರಾಗಿಸುತ್ತದೆ. ಆದರೆ, ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವವರು ಮಾತ್ರ ಬೀಟ್ ರೂಟ್ ಸೇವನೆ ಮಾಡುವ ವೇಳೆ ಬಹಳ ಎಚ್ಚರದಿಂದ ಇರಬೇಕಾಗುತ್ತದೆ. ಏಕೆಂದರೆ ಇದರಲ್ಲಿ ಪೋಷಕಾಂಶಗಳು ಹೇರಳವಾಗಿರುವುದರಿಂದ ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಇಂತಹವರು ಮಿತವಾಗಿ ಆಹಾರ ಸೇವನೆ ಮಾಡುವುದು, ಗುಣಮಟ್ಟದ ಮೇಲೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ.