Advertisement

ಅಬ್ಬಕ್ಕ ಪ್ರಶಸ್ತಿಗೆ ಉಷಾ, ಶ್ರೀಮಾ ಆಯ್ಕೆ ; ಮಾ. 1: ಪ್ರಶಸ್ತಿ ಪ್ರದಾನ

10:06 AM Feb 25, 2020 | sudhir |

ಮಂಗಳೂರು: ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ನೀಡುವ ಅಬ್ಬಕ್ಕ ಪ್ರಶಸ್ತಿಗೆ ಸಾಹಿತಿ, ಕಾದಂಬರಿಗಾರ್ತಿ ಉಷಾ ಪಿ. ರೈ
ಹಾಗೂ ರಾಷ್ಟ್ರೀಯ ಕ್ರೀಡಾಪಟು ಶ್ರೀಮಾ ಪ್ರಿಯದರ್ಶಿನಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿದ್ದು ಮಾ. 1ರಂದು ಜರಗುವ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ರವಿವಾರ ಪತ್ರಿಕಾಗೋಷ್ಠಿಯಲ್ಲಿ ಉತ್ಸವದ ಬಗ್ಗೆ ವಿವರಿಸಿದರು.

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಫೆ. 29 ಮತ್ತು ಮಾ. 1ರಂದು ಅಸೈಗೋಳಿಯ ಕೇಂದ್ರ
ಮೈದಾನದಲ್ಲಿ ಅಬ್ಬಕ್ಕ ಉತ್ಸವ ನಡೆಯಲಿದೆ. ಫೆ. 29ರಂದು ಮಧ್ಯಾಹ್ನ 3.30ಕ್ಕೆ ದೇರಳಕಟ್ಟೆಯಲ್ಲಿ ಅಬ್ಬಕ್ಕ ಉÕತವ ಮೆರವಣಿಗೆ ನಡೆಯಲಿದ್ದು ಶಾಸಕ ಖಾದರ್‌ ಉದ್ಘಾಟಿಸಲಿದ್ದಾರೆ. ಸಂಜೆ 5 ಗಂಟೆಗೆ ಉತ್ಸವದ ಉದ್ಘಾ
ಟನೆ ನಡೆಯಲಿದೆ. ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಹರೇಕಳ ಹಾಜಬ್ಬ ಆಗಮಿಸಲಿದ್ದಾರೆ. ಮಾ. 1ರಂದು ಸಂಜೆ 5ಕ್ಕೆ ಸಮಾರೋಪ ಸಮಾರಂಭ ಜರಗಲಿದೆ. 2 ದಿನಗಳ ಕಾಲ ನಡೆಯುವ ಅಬ್ಬಕ್ಕ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಆಯೋಜಿಸಲಾಗಿದೆ.

ವಿವಿಧ ಸ್ಪರ್ಧೆಗಳು: ಉತ್ಸವಕ್ಕೆ ಪೂರ್ವಭಾವಿಯಾಗಿ ಫೆ. 23ರಂದು ಕ್ರೀಡಾಕೂಟ ನಡೆಯಿತು. ಫೆ. 25ರಂದು ಜೆಪ್ಪು ಸಂತ ಜೆರೋಸಾ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. ಬಲ್ಮಠ ಸರಕಾರಿ ಪ್ರ. ದರ್ಜೆ ಮಹಿಳಾ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಭಾಷಣ ಮತ್ತು ಕಿರುನಾಟಕ ಸ್ಪರ್ಧೆ ಜರಗಲಿದೆ. ಫೆ. 27ರಂದು ವಿ.ವಿ. ಕಾಲೇಜನ ರವೀಂದ್ರ ಕಲಾಭವನದಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ ಆಯೋಜಿಸಲಾಗಿದೆ. ಅಬ್ಬಕ್ಕ ಉತ್ಸವಕ್ಕೆ ರಾಜ್ಯದ ವತಿಯಿಂದ 30 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್‌ ಜಿ. ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next