ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವುದು ಕಾಂಗ್ರೆಸ್‌ಗೆ ರೂಢಿಯಾಗಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದರು.
ರಾಜ್ಯದ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ, ಪ್ರಧಾನಿ ಮೋದಿ ಅವರನ್ನು “ಭಸ್ಮಾಸುರ’ ಎಂದು ಜರಿದಿದ್ದರು. ಅದೇ ರೀತಿ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಅವರನ್ನು “ರಾವಣ’ ಎಂದು ಟೀಕಿಸಿದ್ದರು.
ಈ ಹೇಳಿಕೆಗಳನ್ನು ಉಲ್ಲೇಖಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಬಿತ್ ಪಾತ್ರ, “ಒಂದು ಕಡೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಸೇರಿದಂತೆ ವಿಶ್ವ ನಾಯಕರು ಮೋದಿ ಅವರನ್ನು ಶ್ಲಾ ಸುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಈ ರೀತಿಯ ಭಾಷೆಯನ್ನು ಬಳಸಿ ಟೀಕಿಸುತ್ತಿದೆ. ಇದು ನಿಜಕ್ಕೂ ದುಃಖದಾಯಕ ವಿಷಯವಾಗಿದೆ,’ ಎಂದರು.