Advertisement

ಯುವತಿಯ ರಕ್ಷಣೆಗೆ ತೆರಳಿದ್ದ ರಮೇಶ್ ರೈಗೆ ಶೌರ್ಯ ಪ್ರಶಸ್ತಿ ನೀಡಲು ಯು.ಟಿ.ಖಾದರ್‌ ಆಗ್ರಹ

10:07 PM Feb 21, 2023 | Team Udayavani |

ವಿಧಾನಸಭೆ: ಕಡಬದಲ್ಲಿ ಆನೆ ತುಳಿತಕ್ಕೆ ಸಿಕ್ಕವರನ್ನು ರಕ್ಷಿಸಲು ಹೋಗಿ ಪ್ರಾಣ ತೆತ್ತ ರಮೇಶ್‌ ರೈ ಅವರಿಗೆ ಶೌರ್ಯ ಪ್ರಶಸ್ತಿ ನೀಡಬೇಕೆಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಉಪನಾಯಕ ಯು.ಟಿ.ಖಾದರ್‌ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Advertisement

ಕಡಬದಲ್ಲಿ ನಡೆದ ಆನೆದಾಳಿ ವಿಚಾರವನ್ನು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ಅವರು, ಈ ಘಟನೆಯಲ್ಲ ಇಬ್ಬರು ಮೃತಪಟ್ಟಿದ್ದಾರೆ.

ರಂಜಿತ್‌ ಎಂಬುವರ ರಕ್ಷಣೆಗೆ ಹೋದ ರಮೇಶ್‌ ರೈ ಕೂಡ ಸಾವನ್ನಪ್ಪಿದ್ದಾರೆ. ಹೀಗಾಗಿ ಅವರಿಗೆ ಮರಣೋತ್ತರವಾಗಿ ಶೌರ್ಯ ಪ್ರಶಸ್ತಿ ನೀಡುವ ಜತೆಗೆ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಈ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದ ಹಿನ್ನೆಲೆಯಲ್ಲಿ ನಾಳೆ ಉತ್ತರ ನೀಡಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಸದನಕ್ಕೆ ತಿಳಿಸಿದರು.

ಗೌರವಧನ ಪರಿಷ್ಕರಣೆ ಬಗ್ಗೆ ಪರಿಶೀಲನೆ
ಆಶ್ರಮ ಶಾಲಾ ಶಿಕ್ಷಕರ ಗೌರವಧನ ಪರಿಷ್ಕರಣೆ ಮಾಡುವ ಬಗ್ಗೆ ಸರ್ಕಾರ ಪರಿಶೀಲಿಸಲಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಪ್ರಶ್ನೆಗೆ ಉತ್ತರಿಸಿ, 38778 ಶಿಕ್ಷಕರಿಗೆ ಕನಿಷ್ಠ ವೇತನ ನೀಡುವುದಕ್ಕೆ 712 ಕೋಟಿ ರೂ. ಬೇಕಾಗುತ್ತದೆ. ಸದ್ಯಕ್ಕೆ 10500 ರೂ. ಗೌರವ ಧನ ನೀಡುತ್ತಿದ್ದೇವೆ. ವೇತನ ಪರಿಷ್ಕರಣೆ ಬಗ್ಗೆ ಪರಿಶೀಲಿಸುತ್ತೇವೆ ಎಂದರು.

ಸುಂದರೇಶ್‌ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ
ಸಕಲೇಶಪುರದ ರಕ್ಷಿತಾರಣ್ಯದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟ ಫಾರೆಸ್ಟ್‌ ಗಾರ್ಡ್‌ ಸುಂದರೇಶ್‌ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು. ಅವರ ಪತ್ನಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವುದಕ್ಕೂ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಅರಣ್ಯದಲ್ಲಿ ಸಾಮಾನ್ಯ ಗಸ್ತು ತಿರುಗಲು ಹೋದಾಗ ಈ ಅವಘಡ ಸಂಭವಿಸಿದೆ. ಇನ್ನೊಬ್ಬ ಅಧಿಕಾರಿ ಚಿಂತಾಜನಕರಾಗಿದ್ದಾರೆ. ಮೃತರ ಕುಟುಂಬಕ್ಕೆ ಇದುವರೆಗೆ 30 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ಆದರೆ ನಾವು ಈ ಬಾರಿ 50 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next