Advertisement

ಶಾಸನ ಸಭೆಯ ಗೌರವ ಕಾಪಾಡಿ: ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ

04:45 PM Jun 08, 2023 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು.

Advertisement

ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಅನುಭವ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ಇದನ್ನೂ ಓದಿ:500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

ಸಭಾಧ್ಯಕ್ಷರಾಗಿ ಕಾರ್ಯ ಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next