Advertisement

ಬಳಸದ ಹಣ ಪರಿಶಿಷ್ಟರ ಕಲ್ಯಾಣಕ್ಕೆ ಬಳಕೆ

11:20 PM Sep 16, 2019 | Team Udayavani |

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಬಳಕೆ ಯಾಗದೆ ಉಳಿಯಬಹುದಾದ ಎಸ್‌ಸಿಪಿ- ಟಿಎಸ್‌ಪಿ ಅನುದಾನವನ್ನು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿನ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಮನೆ ನಿರ್ಮಾಣ, ಮೂಲ ಸೌಕರ್ಯಕ್ಕೆ ವಿನಿಯೋಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

Advertisement

ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಇತ್ತೀಚೆಗೆ ನೋಡಲ್‌ ಏಜೆನ್ಸಿಗಳ ಸಭೆ ನಡೆಸಿದ್ದರು. ವಿವಿಧ ಇಲಾಖೆಗಳಲ್ಲಿ ಖರ್ಚಾಗದೆ ಉಳಿಯಬಹುದಾದ ಅನುದಾನವನ್ನು ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಪ.ಜಾ., ಪಂಗಡದ ಜನರಿಗೆ ಮನೆ ನಿರ್ಮಾಣ, ಮೂಲ ಸೌಕರ್ಯಕ್ಕೆ ಬಳಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

1,157 ಕೋಟಿ ರೂ. ಉಳಿತಾಯ ನಿರೀಕ್ಷೆ: ಅದರಂತೆ ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲೋಕೋಪಯೋಗಿ, ಭಾರೀ ನೀರಾವರಿ, ನಗರಾಭಿವೃದ್ಧಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಗಳಲ್ಲಿ ಎಸ್‌ಸಿಪಿ (ಪರಿಶಿಷ್ಟ ಜಾತಿ) ಯೋಜನೆ ಅನುದಾನದಡಿ 780.82 ಕೋಟಿ ರೂ.

ಹಾಗೂ ಟಿಎಸ್‌ಪಿ (ಪ.ಪಂ.) ಅನುದಾನದಡಿ 367 ಕೋಟಿ ರೂ. ಸೇರಿ ಒಟ್ಟು 1157.55 ಕೋಟಿ ರೂ. ಉಳಿತಾ ಯವಾಗುವ ಅಂದಾಜು ಇದೆ ಎಂದು ಹೇಳಿದರು. ನಗರ ಸ್ಥಳೀಯ ಸಂಸ್ಥೆಗಳಿಗೆ ಎಸ್‌ಸಿಪಿ - ಟಿಎಸ್‌ಪಿ ಯೋಜನೆ ಅನುದಾನ ದಲ್ಲಿ ಶೇ.50ರಷ್ಟನ್ನು ಪ.ಜಾ.,ಪಂಗಡದ ಜನರಿಗೆ ಮನೆ ನಿರ್ಮಾಣಕ್ಕೆ ಉಪಯೋಗಿ ಸಲು ಸಭೆಯಲ್ಲಿ ಸೂಚಿಸಲಾಗಿದೆ ಎಂದರು.

ತುಮಕೂರು-ಶಿವಮೊಗ್ಗ ಹೆದ್ದಾರಿ ಕಾಮಗಾರಿ ಆರಂಭಕ್ಕೆ ಸೂಚನೆ
ಬೆಂಗಳೂರು: ತುಮಕೂರು- ಶಿವಮೊಗ್ಗ ಹೆದ್ದಾರಿ ಯೋಜನೆಗೆ ತೊಡಕಾಗಿದ್ದ ತುಮಕೂರು ಪಟ್ಟಣದ ಭೂ ಸ್ವಾಧೀನ ಪ್ರಕ್ರಿಯೆಗಿದ್ದ ಸಮಸ್ಯೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಗೆಹರಿಯಿತು.

Advertisement

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸೋಮವಾರ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್‌.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿ ಅಧಿಕಾರಿಗಳೊಂದಿಗೆ ಯಡಿಯೂರಪ್ಪ ನಡೆಸಿದ ಸಭೆಯಲ್ಲಿ ತುಮಕೂರು- ಶಿವಮೊಗ್ಗ ಯೋಜನೆ ಸಂಬಂಧ ಹೆದ್ದಾರಿ ಯಲ್ಲಿ ಹಾದು ಹೋಗುವ ಜಾಗದಲ್ಲಿರುವ ಕೆರೆಗಳ ಹೂಳೆತ್ತಿ ಆ ಮಣ್ಣನ್ನು ರಸ್ತೆ ನಿರ್ಮಾಣಕ್ಕೆ ಬಳಸಲು ತೀರ್ಮಾನಿಸಲಾಯಿತು.

ಮುಖ್ಯಮಂತ್ರಿ ಯಡಿಯೂರಪ್ಪ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಹೆಚ್ಚಿನ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳು ವಂತೆಯೂ ಸೂಚನೆ ನೀಡಿದರು. ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಮಲೆನಾಡು ಭಾಗದಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಹೆಚ್ಚಾಗಿದೆ. ಖಾಸಗಿ ಟೆಲಿಕಾಂ ಕಂಪನಿಗಳ ಜತೆಗೂಡಿ ಹೆಚ್ಚಿನ ಮೊಬೈಲ್‌ ನೆಟ್‌ವರ್ಕ್‌ ಟವರ್‌ಗಳನ್ನು ನಿರ್ಮಿಸಬೇಕಿದೆ.

ಮಲೆನಾಡಿನ ಹೆಚ್ಚಿನ ಭಾಗಗಳಲ್ಲಿ ಬಿಎಸ್‌ಎನ್‌ಎಲ್‌ ಟವರ್‌ಗಳಿದ್ದು, ಖಾಸಗಿ ಕಂಪನಿಗಳು ಇತ್ತ ಗಮನ ಹರಿಸಬೇಕಿದೆ ಎಂದರು. ಈ ಬಗ್ಗೆ ವಿಸ್ತೃತ ಚರ್ಚೆ ಬಳಿಕ ಸಭೆಯ ಲ್ಲಿದ್ದ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಮಲೆ ನಾಡು ಭಾಗದಲ್ಲಿ ಯಾವುದೇ ರೀತಿಯಲ್ಲಿ ನೆಟ್‌ವರ್ಕ್‌ ಸಮಸ್ಯೆ ಉಂಟಾಗದಂತೆ ಟವರ್‌ಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಯಿತು. ಅದಕ್ಕೆ ಅಗತ್ಯವಿರುವ ನೆರವು ನೀಡಲು ಸಿದ್ಧ ಎಂದು ಭರವಸೆ ನೀಡಿದರು.

ಬೇರೆ ಉದ್ದೇಶಕ್ಕೆ ಹಣ ಬಳಸದಂತೆ ಮನವಿ
ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಎಸ್‌ಸಿಪಿ- ಟಿಎಸ್‌ಪಿ ಅನುದಾನವನ್ನು ನೆರೆ ಸಂತ್ರಸ್ತರಿಗೆ ನೀಡುವುದು ಅಕ್ಷಮ್ಯ ಅಪರಾಧ. ಅದಕ್ಕೆ ಅವಕಾಶ ನೀಡಬಾರದು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ. ವೆಂಕಟಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ವಿಧಾನಸೌಧದಲ್ಲಿ ಸೋಮ ವಾರ ಎಸ್‌ಸಿಪಿ- ಟಿಎಸ್‌ಪಿ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದಿದ್ದ ರಾಜ್ಯ ಪರಿಷತ್‌ ಸಭೆಯ ವೇಳೆ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ನೆರೆ ಪೀಡಿತ ಪ್ರದೇಶದಲ್ಲಿ ಮನೆ ಕಳೆದುಕೊಂಡವರ ಪೈಕಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಮನೆ ನಿರ್ಮಾಣ ಹಾಗೂ ಕಾಲೋನಿ ರಸ್ತೆಗಳಾಗಿರುವ ಕಡೆ ಮೂಲ ಸೌಕರ್ಯ ಕಲ್ಪಿಸಲು ವಿನಿಯೋಗಿಸಲಾಗುವುದು. ಒಂದು ಪೈಸೆಯನ್ನೂ ಬೇರೆಡೆಗೆ ವರ್ಗಾವಣೆ ಮಾಡುವುದಿಲ್ಲ.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next