Advertisement

ಸರ್ಕಾರಿ ಯೋಜನೆ ಸದುಪಯೋಗ ಮಾಡಿಕೊಳ್ಳಿ: ಪಾಟೀಲ

12:27 PM Jan 21, 2022 | Team Udayavani |

ಶಹಾಬಾದ: ಸರ್ಕಾರ ಅನೇಕ ಯೋಜನೆಗಳ ಮೂಲಕ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಂಡು ಸರಿಯಾಗಿ ಅಧ್ಯಯನ ಮಾಡಿ, ಉನ್ನತ ಸಾಧನೆ ಮಾಡಬೇಕು ಎಂದು ಉಪನ್ಯಾಸಕ ಎಚ್‌.ಬಿ. ಪಾಟೀಲ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Advertisement

ಸಮೀಪದ ಝಾಪೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮವಸ್ತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಉಚಿತ ಮತ್ತು ಕಡ್ಡಾಯ ಶಿಕ್ಷಣ ಸಂವಿಧಾನದ ಆಶಯವಾಗಿದ್ದು, ಅದನ್ನು ಕಾರ್ಯರೂಪದಲ್ಲಿ ತರಲು ಸರ್ಕಾರವು ಎಲ್ಲೆಡೆ ಶಾಲೆಗಳನ್ನು ತೆರೆಯುವುದು, ಉಚಿತವಾಗಿ ಬಟ್ಟೆ, ಪುಸ್ತಕ, ಸೈಕಲ್‌, ಊಟ, ವಿದ್ಯಾರ್ಥಿವೇತನ ಸೇರಿದಂತೆ ಅನೇಕ ಒದಗಿಸಿಕೊಡುತ್ತಿದೆ. ವಿದ್ಯಾರ್ಥಿಗಳು ಇವುಗಳನ್ನು ಪಡೆದುಕೊಂಡು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಬೇಕು. ಕಲಿತ ಶಾಲೆ, ಕಲಿಸಿದ ಗುರುಗಳು, ಹೆತ್ತ ತಂದೆ-ತಾಯಿಗೆ ಕೀರ್ತಿ ತರುವ ಕೆಲಸ ತಮ್ಮಿಂದಾಗಬೇಕು ಎಂದು ಹೇಳಿದರು.

ಶಾಲೆ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಗಣಮುಖೀ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಬುದ್ಧಿ, ಕೌಶಲ್ಯಗಳನ್ನು ಕಲಿಯಬೇಕು. ಬಾಲ್ಯದಿಂದಲೇ ಕೆಟ್ಟ ಚಟಗಳಿಂದ ದೂರವಿರಬೇಕು. ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡಬೇಕು. ಪಾಲಕರು ತಮ್ಮ ಮಕ್ಕಳಿಗೆ ಶೈಕ್ಷಣಿಕ ವಾತಾವರಣ ಕಲ್ಪಿಸಿಕೊಡಬೇಕು. ಶೈಕ್ಷಣಿಕ ಅಭಿವೃದ್ಧಿಯಲ್ಲಿ ಸಮುದಾಯ ಭಾಗವಹಿಸುವದರಿಂದ ಕಲಿಕೆ-ಬೋಧನೆ ಪರಿಣಾಮಕಾರಿಯಾಗಲು ಸಾಧ್ಯವಾಗುತ್ತದೆ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ಎಸ್‌ ಡಿಎಂಸಿ ಅಧ್ಯಕ್ಷ ಸುರೇಶ ಮಾಂಗ್‌, ಗ್ರಾ.ಪಂ ಸದಸ್ಯರಾದ ಪೀರಪ್ಪ ದೊಡ್ಡಮನಿ, ಪರಮೇಶ್ವರ ಪೂಜಾರಿ, ಸಹ ಶಿಕ್ಷಕರಾದ ಶಾಂತಾಬಾಯಿ ವಿ. ಹಿರೇಮಠ, ಲಕ್ಕುನಾಯಕ್‌, ವೀರವ್ವ ಕಿಣ್ಣನವರ್‌, ಗ್ರಾಮಸ್ಥರಾದ ಅರುಣಕುಮಾರ ಕಟ್ಟಿಮನಿ, ಶರಣಪ್ಪ ಪೂಜಾರಿ, ಪರಶುರಾಮ ದೊಡ್ಡಮನಿ, ಶಿವರಾಜ ವಡ್ಡರ್‌, ಶಿಕ್ಷಕಿ ಮಂಜುಳಾ ಮೇಲಿನಮನಿ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next