Advertisement
ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಜೀಪಮೂಡ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆದಿತ್ತು. ಸಜೀಪಮೂಡ ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಬೆಳ್ಚಾಡ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.
ಜಿಲ್ಲಾ ಸಂಪರ್ಕಾಧಿಕಾರಿ ಜಗನ್ನಾಥ ಮಾತನಾಡಿ, ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಇಂದು ಬಹುತೇಕ ಜನ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಸಾರ್ವತ್ರಿಕ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಭಾರತ್ ಎಂಬ ಈ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ಈ ಎಲ್ಲ ವ್ಯವಸ್ಥೆಯಡಿಯಲ್ಲಿ ಫಲಾನುಭವಿಗಳು ಸೌಲಭ್ಯ ಪಡೆಯಬೇಕು ಎಂದರು. ಗ್ರಾ.ಪಂ. ಸದಸ್ಯರಾದ ಯಮುನಾ, ಸರಸ್ವತಿ, ಹರಿಣಾಕ್ಷೀ, ಹೇಮಾವತಿ, ಸಮೀಮಾ, ಸೀತಾರಾಮ, ಬಂಟ್ವಾಳ ಸಿ.ಡಿ.ಪಿ.ಒ. ಮಲ್ಲಿಕಾ, ಮೇಲ್ಬಿಚಾರಕ ನವೀನ್, ಪಿಡಿಒ ನಿರ್ಮಲಾ ಉಪಸ್ಥಿತರಿದ್ದರು. ಮೆರವಣಿಗೆ
ಕಾರ್ಯಕ್ರಮದ ಪೂರ್ವದಲ್ಲಿ ಸ್ಥಳೀಯವಾಗಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಕ್ಷೇತ್ರ ಕ್ಷೇತ್ರ ಪ್ರಚಾರ ಅಧಿಕಾರಿ ತುಕಾರಾಮ ಗೌಡ ಪ್ರಸ್ತಾವನೆ ನೀಡಿದರು. ಜನ ಸಂಪರ್ಕ ಕಾರ್ಯಾಲಯ ಸಿಬಂದಿ ರೋಹಿತ್ ಸ್ವಾಗತಿಸಿ, ಮೇಲ್ವಿಚಾರಕಿ ಸವಿತಾ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಭಾರತಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಬಳಿಕ ಕಾರ್ಯಕರ್ತೆಯರಿಗೆ ರಸಪ್ರಶ್ನೆ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.
Related Articles
ಬಿ.ಪಿ.ಎಲ್. ಮತ್ತು ಅಂತ್ಯೋದಯ ಕಾರ್ಡುದಾರರಿಗೆ 5 ಲಕ್ಷ ರೂ. ಹಾಗೂ ಎ.ಪಿ.ಎಲ್. ಕಾರ್ಡ್‌ದಾರರಿಗೆ 1.50 ಲಕ್ಷ ರೂ. ಸೌಲಭ್ಯವನ್ನು ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ನೀಡಲಾಗಿದೆ. ಇದರ ಜತೆಗೆ ಬೇರೆ ಬೇರೆ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆಗಳಿವೆ. ಈ ಬಗ್ಗೆ ಸ್ಥಳೀಯ ಸರಕಾರಿ ಆಸ್ಪತ್ರೆಗಳಲ್ಲಿ ಮಾಹಿತಿ ಪಡೆಯುವಂತೆ ಜಿಲ್ಲಾ ಸಂಪರ್ಕಾಧಿಕಾರಿ ಜಗನ್ನಾಥ ಅವರು ಸೂಚಿಸಿದರು. 18004258330 ಈ ಮೊಬೈಲ್ ನಂ. ಮೂಲಕವೂ ಮಾಹಿತಿ ಪಡೆಯಲು ಸಾಧ್ಯ ಎಂದು ಅವರು ತಿಳಿಸಿದರು.
Advertisement