ನವದೆಹಲಿ: ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಮಾಯಾವತಿಯ ಬಹುಜನ್ ಸಮಾಜ್ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬುಧವಾರ(ಜೂನ್ 16) ತಿಳಿಸಿದ್ದಾರೆ.
ಇದನ್ನೂ ಓದಿ:ಅರುಣ್ ಸಿಂಗ್ ನಾಯಕತ್ವ ಬದಲಾವಣೆ ವಿಚಾರಕ್ಕೆ ಫುಲ್ ಸ್ಟಾಪ್ ಹಾಕ್ತಾರೆ : ರವಿಕುಮಾರ್
ಸಮಾಜವಾದಿ ಪಕ್ಷ ಯಾವುದೇ ರಾಷ್ಟ್ರೀಯ, ಪ್ರಮುಖ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ, ಆದರೆ ಪುಟ್ಟ ಪ್ರಾದೇಶಿಕ ಪಕ್ಷಗಳ ಜತೆ ಕೈಜೋಡಿಸಲು ಸಿದ್ಧರಾಗಿರುವುದಾಗಿ ಅಖಿಲೇಶ್ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ಹೇಳಿದೆ.
ಮುಂಬರುವ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಯಂತ್ ಚೌಧರಿ ಅವರ ರಾಷ್ಟ್ರೀಯ ಲೋಕ್ ದಳ, ಸಂಜಯ್ ಚೌಹಾಣ್ ಅವರ ಜನವಾದಿ ಪಕ್ಷ ಹಾಗೂ ಕೇಶವ್ ದೇವ್ ಮೌರ್ಯ ಅವರ ಮಹಾನ್ ದಳದ ಜತೆ ಮೈತ್ರಿ ಮಾಡಿಕೊಳ್ಳುವುದಾಗಿ ಯಾದವ್ ತಿಳಿಸಿದ್ದಾರೆ.
ಅಷ್ಟೇ ಅಲ್ಲ ಚಿಕ್ಕಪ್ಪ ಶಿವ್ ಪಾಲ್ ಯಾದವ್ ಅವರ ಪಕ್ಷದ ಜತೆಯೂ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುಳಿವು ನೀಡಿರುವ ಅಖಿಲೇಶ್, ಸಮಾಜವಾದಿ ಪಕ್ಷ ಜಸ್ವಂತ್ ನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಹೇಳಿದರು.