ನವದೆಹಲಿ: ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಗಮನಾರ್ಹ ಇಳಿಕೆ ಕಂಡಲ್ಲಿ ಜೂನ್ 7ರಿಂದ ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ಕೋವಿಡ್ ಕರ್ಫ್ಯೂವನ್ನು ತೆರವುಗೊಳಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:5ಜಿ ತಂತ್ರಜ್ಞಾನ: ಜೂಹಿ ಚಾವ್ಲಾ ಅರ್ಜಿ ವಜಾಗೊಳಿಸಿ 20 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಜಯ್ ಶಂಕರ್ ಪಾಂಡೆ ಮಾಹಿತಿ ನೀಡಿದ್ದು, ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು 600ಕ್ಕಿಂತ ಕಡಿಮೆಗೊಳಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು.
ಗಾಜಿಯಾಬಾದ್ ನಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವುದು, ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಗುಣಮುಖರಾಗುತ್ತಿರುವುದರಿಂದ ಸೋಮವಾರದಿಂದ ಭಾಗಶಃವಾಗಿ ಕೋವಿಡ್ ಕರ್ಫ್ಯೂವನ್ನು ತೆರವುಗೊಳಿಸುವ ಸಾಧ್ಯತೆ ಇದೆ ಎಂದು ಹೇಳಿದರು.
ನಾವು ಪ್ರತಿದಿನದ ಅಂಕಿಅಂಶವನ್ನು ಪರಿಶೀಲಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೊರಡಿಸಿರುವ ಆದೇಶಕ್ಕೆ ಪ್ರೋತ್ಸಾಹ ನೀಡಿ 600ಕ್ಕಿಂತ ಕಡಿಮೆ ಪ್ರಕರಣಕ್ಕೆ ತರಬೇಕಾಗಿದೆ ಎಂದು ಪಾಂಡೆ ತಿಳಿಸಿರುವುದಾಗಿ ವರದಿ ಹೇಳಿದೆ.