Advertisement

2025ರಲ್ಲಿ ನಡೆಯಲಿರುವ ಮಹಾ ಕುಂಭ ಮೇಳಕ್ಕೆ 2,500 ಕೋಟಿ

12:54 AM Feb 23, 2023 | Team Udayavani |

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ನೇತೃತ್ವದ ಸರಕಾರದ ಬಜೆಟ್‌ನಲ್ಲಿ 2025ರಲ್ಲಿ ನಡೆಯಲಿರುವ ಮಹಾಕುಂಭ ಮೇಳಕ್ಕೆ 2,500 ಕೋ.ರೂ. ನೀಡುವ ಪ್ರಸ್ತಾವನೆ ಮಂಡಿಸಲಾಗಿದೆ.

Advertisement

2022-­23ನೇ ಸಾಲಿನಲ್ಲಿ 621.55 ಕೋಟಿ ರೂ. ಮೊತ್ತವನ್ನು ನೀಡಲಾಗಿತ್ತು. 12 ವರ್ಷಕ್ಕೊಮ್ಮೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮಕ್ಕೆ ರಸ್ತೆಗಳ ದುರಸ್ತಿ, ಅಗಲ ಮಾಡುವ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ.

ಇದಲ್ಲದೆ ಅಯೋಧ್ಯೆ ಯಲ್ಲಿ ರಸ್ತೆ ಅಭಿವೃದ್ಧಿ ಸಹಿತ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿ­ಗಳಿಗೆ 1 ಸಾವಿರ ಕೋಟಿ ರೂ. ನೀಡುವ ಪ್ರಸ್ತಾವ ಮಂಡಿಸಲಾ­ಗಿದೆ. ಇದೇ ವೇಳೆ ಉತ್ತರ ಪ್ರದೇಶದಲ್ಲಿ ಕೂಡ ಆತ್ಮನಿರ್ಭರ ಮಂತ್ರವನ್ನು ಜಪಿಸಲಾಗಿದೆ. ಒಟ್ಟು 7 ಲಕ್ಷ ಕೋಟಿ ರೂ. ಮೌಲ್ಯದ ಬಜೆಟ್‌ ಮಂಡಿಸಲಾಗಿದೆ.

ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕೈಗೊಳ್ಳಲು ಮತ್ತು ಅರ್ಥ ವ್ಯವಸ್ಥೆಯನ್ನು 1 ಶತಕೋಟಿ ಡಾಲರ್‌ಗೆ ಏರಿಕೆ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next