ನವದೆಹಲಿ:ಕೋವಿಡ್ 19 ಸೋಂಕು ಸಂದರ್ಭದಲ್ಲಿ ಶಾಲೆಯ ಶೈಕ್ಷಣಿಕ ಶುಲ್ಕವನ್ನು ಹೆಚ್ಚಳ ಮಾಡುವುದನ್ನು ನಿಷೇಧಿಸಿ ಉತ್ತರಪ್ರದೇಶ ಸರ್ಕಾರ ಗುರುವಾರ (ಮೇ 20) ಆದೇಶ ಹೊರಡಿಸಿದೆ.
ಇದನ್ನೂ ಓದಿ:ಕಾಪು: ಪುತ್ತಿಗೆ ಮಠ, ಗುರ್ಮೆ ಫೌಂಡೇಶನ್ ವತಿಯಿಂದ 4 ಆಂಬ್ಯುಲೆನ್ಸ್ ಲೋಕಾರ್ಪಣೆ
2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ ಯಾವುದೇ ಶಾಲೆಗಳು ಶುಲ್ಕವನ್ನು ಹೆಚ್ಚಳ ಮಾಡದಂತೆ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ರಾಜ್ಯದಲ್ಲಿರುವ ಎಲ್ಲಾ ಶಾಲೆಗಳಿಗೂ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಶಾಲೆಗಳು ಬಂದ್ ಆದ ಸಮಯದಲ್ಲಿನ ಸಾರಿಗೆ ಶುಲ್ಕವನ್ನು ಕೂಡಾ ಶಾಲೆಗಳು ತೆಗೆದುಕೊಳ್ಳುವಂತಿಲ್ಲ ಎಂದು ತಿಳಿಸಿದೆ. ಮೇ 20ರಿಂದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ಆರಂಭಿಸುವಂತೆ ಸರ್ಕಾರ ಈ ಮೊದಲು ಆದೇಶ ಹೊರಡಿಸಿತ್ತು.
ರಾಜ್ಯದಲ್ಲಿ ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಯೂನಿರ್ವಸಿಟಿ, ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿಯನ್ನು ಹೊರಡಿಸಿತ್ತು.