ಲಕ್ನೋ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ (ಫೆ.25 ರಂದು) ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.
ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕೌಶಂಬಿಯ ಭರ್ವಾರಿ ಪಟ್ಟಣದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.
“ಭಾರ್ವಾರಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.3 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಾಲೀಕರು ಪಟಾಕಿ ತಯಾರಿಸಲು ಮತ್ತು ಮಾರಾಟ ಮಾಡಲು ಪರವಾನಗಿ ಹೊಂದಿದ್ದರು ಎಂದು ಪೊಲೀಸ್ ಸೂಪರಿಂಟೆಂಡೆಂಟ್ (ಎಸ್ಪಿ) ಬ್ರಿಜೇಶ್ ಶ್ರೀವಾಸ್ತವ ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದರು ಮತ್ತು 170 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.