ಹಾಪುರ್: ತೆರೆದ ಕೊಳವೆಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದ ನಾಲ್ಕು ವರ್ಷದ ಮಾತು ಬಾರದ ಮೂಕ ಬಾಲಕನನ್ನು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ(ಎನ್‌ಡಿಆರ್‌ಎಫ್) ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿರುವ ಘಟನೆ ಉತ್ತರ ಪ್ರದೇಶದ ಹಾಪುರದ ಕೋಟ್ಲಾ ಸಾದತ್ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಆಟವಾಡುತ್ತಿದ್ದ ಮಾವಿಯಾ(4) ಆಕಸ್ಮಿಕವಾಗಿ ತೆರೆದ ಕೊಳವೆಬಾವಿಗೆ ಬಿದ್ದಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಂತರ ಎನ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸತತ ಐದು ಗಂಟೆಗಳ ಕಾರ್ಯಾಚರಣೆ ಬಳಿಕ ಬಾಲಕನನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಬಾಲಕನನ್ನು ರಕ್ಷಿಸಿದ ಎನ್‌ಡಿಆರ್‌ಎಫ್ ಸಿಬ್ಬಂದಿಯನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ.