ಲಕ್ನೋ: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತ ವಯಸ್ಸಿನ ಬಾಲಕಿ ಅತ್ಯಾಚಾರಕ್ಕೀಡಾಗಿ 2 ತಿಂಗಳ ಗರ್ಭ ಧರಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಶನಿವಾರ ಈ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಮಿಶ್ರಾ ಈ ಕುರಿತು ಮಾಹಿತಿ ನೀಡಿದ್ದು, “ಶುಕ್ರವಾರ ಸಂತ್ರಸ್ತೆಯು ಮಹಿಳೆಯೊಬ್ಬರೊಂದಿಗೆ ಬಿಧುನಾ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಅದರಲ್ಲಿ ಆಕೆಯ ತಂದೆ, ಅಜ್ಜ ಮತ್ತು ಚಿಕ್ಕಪ್ಪ ಕಳೆದ ಕೆಲ ತಿಂಗಳುಗಳಿಂದ ತನ್ನ ಮೇಲೆ ಅತ್ಯಾಚಾರ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ. ಬಳಿಕ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಆಕೆ 2 ತಿಂಗಳ ಗರ್ಭವತಿ ಎಂಬುದು ತಿಳಿದುಬಂದಿದೆ’ ಎಂದಿದ್ದಾರೆ.
ಸಂತ್ರಸ್ತೆ ದೂರನ್ನು ಆಧರಿಸಿ ಆರೋಪಿ ಗಳ ವಿರುದ್ಧ ಪೋಕ್ಸೋ ಸೇರಿ ವಿವಿಧ ಕಾಯ್ದೆಗಳ ಅನ್ವಯ ಎಫ್ಐಆರ್ ದಾಖಲಿಸಲಾಗಿದೆ. ಬಳಿಕ ಆರೋಪಿಗ ಳನ್ನು ಸ್ಥಳೀಯ ಕೋರ್ಟ್‌ಗೂ ಹಾಜರು ಪಡಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದೂ ಮಿಶ್ರಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು