Advertisement

ಉತ್ತರ ಪ್ರದೇಶಕ್ಕೆ ಸಿಗಲಿದೆ ಐದನೇ ಅಂ.ರಾ. ವಿಮಾನ ನಿಲ್ದಾಣ

06:13 PM Nov 23, 2021 | Team Udayavani |

ನವದೆಹಲಿ: ಒಂದೇ ರಾಜ್ಯದಲ್ಲಿ ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಹೆಗ್ಗಳಿಕೆ ಶೀಘ್ರವೇ ಉತ್ತರ ಪ್ರದೇಶಕ್ಕೆ ಸಿಗಲಿದೆ.

Advertisement

ಪ್ರಧಾನಿ ನರೇಂದ್ರ ಮೋದಿಯವರು ನ.25ರಂದು ಜೇವರ್‌ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಎನ್‌ಐಎ)ಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಮೊದಲ ಹಂತದ ವಿಮಾನ ನಿಲ್ದಾಣದ ಕಾಮಗಾರಿಯನ್ನು 10,050 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ. 1,300 ಹೆಕ್ಟೇರ್‌ ಪ್ರದೇಶದಲ್ಲಿ ಅದು ನಿರ್ಮಾಣವಾಗಲಿದೆ. 2024ರಲ್ಲಿ ಕಾಮಗಾರಿ ಮುಕ್ತಾಯಗೊಂಡು ಸಾರ್ವಜನಿಕರ ಬಳಕೆಗೆ ಸಿಗುವ ಸಂದರ್ಭದಲ್ಲಿ ವಾರ್ಷಿಕವಾಗಿ 1.2 ಕೋಟಿ ಮಂದಿ ಪ್ರಯಾಣಿಕರನ್ನು ನಿರ್ವಹಿಸುವ ವ್ಯವಸ್ಥೆ ಇರಲಿದೆ.

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್‌) ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ.

ಇದನ್ನೂ ಓದಿ:ಪರಿಷತ್ ಚುನಾವಣೆಯಲ್ಲಿ ಹಣ-ಬಲದೊಂದಿಗೆ ಎಲ್ಲವೂ ವರ್ಕ್ ಆಗುತ್ತದೆ: ಹೆಚ್ ಸಿ ಮಹದೇವಪ್ಪ

Advertisement

ಕೆಲ ದಿನಗಳ ಹಿಂದಷ್ಟೇ ಪ್ರಧಾನಿಯವರು ಖುಷಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಇದರ ಜತೆಗೆ ಅಯೋಧ್ಯೆಯಲ್ಲಿಯೂ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಲಕ್ನೋ ಮತ್ತು ವಾರಾಣಸಿ ಹಾಲಿ ಇರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.

ಇದೇ ಮೊದಲು
ದೇಶದಲ್ಲಿ ಮೊದಲ ಬಾರಿಗೆ ವಿಮಾನ ನಿಲ್ದಾಣವೊಂದರಲ್ಲಿ ಏಕೀಕೃತ ಬಹುಹಂತದ ಕಾರ್ಗೊ ಹಬ್‌ ನೂತನ ವಿಮಾನ ನಿಲ್ದಾಣದಲ್ಲಿ ಇರಲಿದೆ. ಇದರಿಂದಾಗಿ ಕಾರ್ಗೊ ನಿರ್ವಹಣೆ ಮತ್ತು ವೆಚ್ಚವನ್ನು ನಿಯಂತ್ರಿಸುವತ್ತ ಗಮನ ಹರಿಸಲಾಗಿದೆ. ಮೊದಲ ಹಂತದಲ್ಲಿ 20 ಲಕ್ಷ ಮೆಟ್ರಿಕ್‌ ಟನ್‌ ಕಾರ್ಗೊ ನಿರ್ವಹಿಸಲು ಸಾಧ್ಯವಾಗಲಿದೆ. ಮುಂದಿನ ಹಂತದಲ್ಲಿ ಅದನ್ನು 80 ಲಕ್ಷ ಟನ್‌ ವರೆಗೆ ವಿಸ್ತರಿಸುವ ಅವಕಾಶ ಉಂಟು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next