ಲಕ್ನೋ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ತಮ್ಮ ಕಚೇರಿಯಲ್ಲೇ ಮದ್ಯ ಸೇವಿಸಿ ಮೋಜು ಮಸ್ತಿ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಶಾಮ್ಲಿಯ ಮೊಹಲ್ಲಾ ರೈಲ್ ಪಾರ್‌ನಲ್ಲಿರುವ ಪೊಲೀಸ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಪೊಲೀಸರ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋದಲ್ಲಿ ಕಾಣುವಂತೆ ಮೂವರು ಅಧಿಕಾರಿಗಳು ಕರ್ತವ್ಯದ ವೇಳೆ ತಮ್ಮ ಕಚೇರಿಯಲ್ಲಿ ಮದ್ಯ ಸೇವಿಸುತ್ತಿರುವುದು ಕಾಣುತ್ತದೆ ಅದರಲ್ಲಿ ಇಬ್ಬರು ಸಮವಸ್ತ್ರದಲ್ಲಿದ್ದರೆ ಓರ್ವ ಟಿ ಶರ್ಟ್ ಧರಿಸಿರುವುದು ಕಾಣಬಹುದು, ಈ ವಿಡಿಯೋ ಉತ್ತರ ಪ್ರದೇಶದ ಶಾಮ್ಲಿಯಲ್ಲಿರುವ 112 ಕಚೇರಿಯದ್ದು ಎಂದು ಹೇಳಲಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ ಅಲ್ಲದೆ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.