Advertisement

ಡಿ.21 ರಂದು ಪ್ರಧಾನಿ ನರೇಂದ್ರ ಮೋದಿ ಪ್ರಯಾಗ್‌ರಾಜ್‌ಗೆ ಭೇಟಿ

07:45 PM Dec 20, 2021 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಭೇಟಿ ನೀಡಲಿದ್ದು, ಸುಮಾರು 2 ಲಕ್ಷ ಮಹಿಳೆಯರು ಭಾಗಿಯಾಗುವ ಮೆಗಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

ಮಹಿಳಾ ಸಬಲೀಕರಣದ ಆಶಯದೊಂದಿಗೆ ಈ ಕಾರ್ಯಕ್ರಮ ನಡೆಯಲಿದ್ದು, ಮಹಿಳಾ ಸ್ವಸಹಾಯ ಸಂಘಗಳ ಖಾತೆಗೆ ಒಂದು ಸಾವಿರ ಕೋಟಿ ರೂ.ಗಳನ್ನು ಪ್ರಧಾನಿ ಮೋದಿ ವರ್ಗಾವಣೆ ಮಾಡಲಿದ್ದು, ಇದರಿಂದ ಸುಮಾರು 16 ಲಕ್ಷ ಮಹಿಳಾ ಸದಸ್ಯರಿಗೆ ಅನುಕೂಲವಾಗಲಿದೆ.

ದೀನದಯಾಳ್‌ ಅಂತ್ಯೋದಯ ಯೋಜನೆ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಈ ಮೊತ್ತ ವರ್ಗಾವಣೆಯಾಗಲಿದೆ.

ಇದನ್ನೂ ಓದಿ:ಒಮಿಕ್ರಾನ್ ಭೀತಿ : ಗುಜರಾತ್ ನ ಎಂಟು ನಗರಗಳಲ್ಲಿ ಡಿ.31 ರ ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ

Advertisement

Udayavani is now on Telegram. Click here to join our channel and stay updated with the latest news.

Next