Advertisement

ಯುಪಿ : ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ,10 ಮಂದಿ ಸಾವು; 37 ಮಂದಿಗೆ ಗಾಯ

10:25 PM Sep 26, 2022 | Team Udayavani |

ಲಕ್ನೋ : ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಹತ್ತು ಮಂದಿ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ. ಉನ್ನಾಯ್ ಗ್ರಾಮದ ದುರ್ಗಾ ದೇವಿ ದೇವಸ್ಥಾನಕ್ಕೆ ‘ಮುಂಡನ್’ ಸಮಾರಂಭಕ್ಕೆ ತೆರಳುತ್ತಿದ್ದ ವಾಹನದಲ್ಲಿ ಸುಮಾರು 47 ಜನರು ಪ್ರಯಾಣಿಸುತ್ತಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸೂರ್ಯ ಪಾಲ್ ಗಂಗ್ವಾರ್ ಹೇಳಿದ್ದಾರೆ.

Advertisement

ಅಪಘಾತದಲ್ಲಿ ಎಂಟು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ.ಗಂಭೀರವಾಗಿ ಗಾಯಗೊಂಡಿರುವ ಓರ್ವ ಗಾಯಾಳುವನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಟೌಂಜಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರರು ಅಪಾಯದಿಂದ ಪಾರಾಗಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಕರೆದಿರುವ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಇನ್ನೂ ಸ್ಥಳದಲ್ಲಿಯೇ ಇದ್ದು ಯಾರೂ ಕೊಳದಲ್ಲಿ ಸಿಲುಕಿಲ್ಲ ಎಂದು ಖಚಿತಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next