ಲಕ್ನೋ : ಉತ್ತರ ಪ್ರದೇಶದಲ್ಲಿರುವ ಈಗಿನ ‘ಅಸಂಬದ್ಧ’ಹಾಗೂ ‘ಋಣಾತ್ಮಕ’ ರಾಜಕೀಯದ ವಿರುದ್ಧವಾಗಿ ಪ್ರಜಾಪ್ರಭುತ್ವದ ಕ್ರಾಂತಿ ಸೃಷ್ಟಿಯಾಗಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಮೂಲಕ ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದ ಅಖಿಲೇಶ್, ‘ಈಗಿನ ಅಸಂಬದ್ಧ’ಹಾಗೂ ‘ಋಣಾತ್ಮಕ’ ರಾಜಕೀಯದ ವಿರುದ್ಧ ಒಂದಾಗಬೇಕಿದೆ. ಶೋಷಿತರು, ನಿರ್ಲಕ್ಷ್ಯಿತರು, ದಲಿತರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಪರವಾದ ಹೊಸ ರಾಜಕೀಯದ ಅಲೆ ಹುಟ್ಟಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಕೊಡಿ :ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ
ಉತ್ತರ ಪ್ರದೇಶದಲ್ಲಿ 2022 ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ರಾಜಕೀಯ ಕಾವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ‘ಉತ್ತರ ಪ್ರದೇಶದಲ್ಲಿ 2022ರಲ್ಲಿ ಕೇವಲ ಚುನಾವಣೆ ನಡೆಯುವುದಿಲ್ಲ. ಬದಲಾಗಿ ನಾಟಕೀಯ ಕ್ರಾಂತಿಯಾಗಲಿದೆ. ವಿಧಾನಸಭಾ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ 350 ಸೀಟುಗಳನ್ನು ಸಮಾಜವಾದಿ ಪಕ್ಷ ಗೆಲ್ಲಲಿದೆ. ಜನರು ಬಿಜೆಪಿಯ ವಿರುದ್ಧ ಇದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ : ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಕೊಡಿ :ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ