ನವದೆಹಲಿ: ಭಾರತೀಯ ಜನತಾ ಪಕ್ಷದ ಸರಕಾರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಹಾಗೂ ಸಬ್ ಕಾ ಪ್ರಯಾಸ್ ಧ್ಯೇಯದಡಿ ಕಾರ್ಯನಿರ್ವಹಿಸುತ್ತಿದೆ. ಆದರೆ ವಿಪಕ್ಷಗಳು ಪ್ರತಿಯೊಬ್ಬರನ್ನು ಒಡೆದಾಳುವ ಮತ್ತು ಒಟ್ಟಿಗೆ ಲೂಟಿ ಮಾಡುವ ಉದ್ದೇಶ ಹೊಂದಿರುವುದಾಇ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಫೆ.11) ಕಾಂಗ್ರೆಸ್ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ಬಹುಮಾನಗಳ ಮಹಾಪೂರ
ಉತ್ತರಾಖಂಡ್ ನ ಅಲ್ಮೋರಾದಲ್ಲಿ ವಿಜಯ್ ಸಂಕಲ್ಪ ಸಭಾ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರ ಏಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಉತ್ತಮ ಉದ್ದೇಶ ಹೊಂದಿರುವ ಪಕ್ಷಗಳನ್ನೇ ಮತದಾರರು ಯಾವಾಗಲೂ ಬೆಂಬಲಿಸುತ್ತಾರೆ ಎಂದು ಪ್ರಧಾನಿ ಹೇಳಿದರು.
ಉತ್ತರಾಖಂಡ್ ನಲ್ಲಿ ಗುರುವಾರ ಮೊದಲ ಹಂತದ ಮತದಾನ ನಡೆದಿದ್ದು, ಈ ಬಾರಿಯೂ ಬಿಜೆಪಿ ಪೂರ್ಣ ಪ್ರಮಾಣದ ಬಹುಮತದೊಂದಿಗೆ ಜಯಭೇರಿ ಗಳಿಸಲಿದೆ. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕೆಂಬುದು ಜನರೇ ತೀರ್ಮಾನಿಸಿದ್ದಾರೆ. ಒಳ್ಳೆಯ ಉದ್ದೇಶಹೊಂದಿದವರನ್ನು ಮತದಾರರು ಯಾವತ್ತೂ ಕೈಬಿಡುವುದಿಲ್ಲ ಎಂದರು.
ಈ ಹಿಂದಿನ ಸರ್ಕಾರ ಉತ್ತರಾಖಂಡ್ ಜಿಲ್ಲೆಯ ಟೆಹ್ಸಿಲ್ಸ್ ನ ಗಡಿಭಾಗದ ಹಳ್ಳಿಗಳನ್ನು ನಿರ್ಲಕ್ಷಿಸಿರುವುದಾಗಿ ಆರೋಪಿಸಿದರು. ಬಿಜೆಪಿ ಸರ್ಕಾರ ಗಡಿಪ್ರದೇಶವನ್ನು ಅಭಿವೃದ್ಧಿಪಡಿಸುವ ಯೋಜನೆ ಸಿದ್ದಪಡಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.