ಉತ್ತರಾಖಂಡ: ಉತ್ತರಾಖಂಡದ ಸಾರಿಗೆ ಮತ್ತು ಸಮಾಜ ಕಲ್ಯಾಣ ಸಚಿವ ಚಂದನ್ ರಾಮ್ ದಾಸ್ ಅವರು ಬುಧವಾರ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬಾಗೇಶ್ವರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಿಪಿ ಜೋಶಿ ತಿಳಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕರಾಗಿದ್ದ ಚಂದನ್ ರಾಮ್ ದಾಸ್ ಅವರು 2007ರಿಂದಲೂ ಬಾಘೇಶ್ವರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ನಾಲ್ಕು ಅವಧಿಗೆ ಶಾಸಕರಾದರೂ ಇದೇ ಮೊದಲ ಬಾರಿಗೆ ಸಚಿವರಾಗಿದ್ದರು.
ಗಣ್ಯರ ಸಂತಾಪ:
ಸಚಿವ ಚಂದನ್ ರಾಮ್ ದಾಸ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
Related Articles