ಡೆಹ್ರಾಡೂನ್/ನವದೆಹಲಿ: ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕರು, ಸಚಿವರಿಂದ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ(ಮಾರ್ಚ್ 09) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕರು, ಸಚಿವರಿಂದ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ(ಮಾರ್ಚ್ 09) ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದ್ದಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಇದನ್ನೂ ಓದಿ:ದೇಶಭಕ್ತಿ ಬಜೆಟ್ ನಲ್ಲಿ ಉಚಿತ ಕೋವಿಡ್ ಲಸಿಕೆ ಘೋಷಿಸಿದ ದೆಹಲಿ ಸರ್ಕಾರ
ರಾಜ್ಯಪಾಲೆ ಬೇಬಿ ರಾಣಿ ಮೌರ್ಯ ಅವರನ್ನು ಮುಖ್ಯಮಂತ್ರಿ ರಾವತ್ ಭೇಟಿಯಾಗುವ ಮೊದಲು ಪತ್ರಿಕಾಗೋಷ್ಠಿ ನಡೆಸಿ ತಮ್ಮ ರಾಜೀನಾಮೆಯನ್ನು ಘೋಷಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿತ್ತು.
ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರ ಕಾರ್ಯವೈಖರಿ ಚೆನ್ನಾಗಿಲ್ಲ ಎಂದು, ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ತರಲಿದೆ ಎಂದು ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ರಾವತ್ ದೆಹಲಿಗೆ ತೆರಳಿದ್ದು, ಬಿಜೆಪಿ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದರು. ವರದಿಯ ಪ್ರಕಾರ, ಮುಖ್ಯಮಂತ್ರಿಯಾಗಿದ್ದ ರಾವತ್ ಅವರ ಸ್ಥಾನಕ್ಕೆ ಸಚಿವ ಧನ್ ಸಿಂಗ್ ರಾವತ್ ಅಥವಾ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಹೆಸರು ಕೇಳಿಬರುತ್ತಿದೆ.