ಡೆಹ್ರಾಡೂನ್: ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಜಿದ್ದಾಜಿದ್ದಿಗೆ ಸಾಕ್ಷಿಯಾದ ಉತ್ತರಾಖಂಡ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯತ್ತಿದೆ. ಆರಂಭಿಕ ಹಂತದ ಮತ ಎಣಿಕೆಯ ಪ್ರಕಾರ ಬಿಜೆಪಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುನ್ನಡೆಯಿದೆ.
70 ಕ್ಷೇತ್ರಗಳ ಸಂಖ್ಯಾಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತಕ್ಕೆ 36 ಕ್ಷೇತ್ರಗಳನ್ನು ಗೆಲ್ಲಬೇಕು. 2017ರಲ್ಲಿ ಬಿಜೆಪಿ 57 ಮತ್ತು ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.
ಲಭ್ಯವಿರುವ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಆಡಳಿತಾರೂಢ ಬಿಜೆಪಿಯು ಉತ್ತರಾಖಂಡದಲ್ಲಿ ಕಾಂಗ್ರೆಸ್‌ಗಿಂತ ಮುಂಚೂಣಿಯಲ್ಲಿದೆ, ಬಿಜೆಪಿ ಪಕ್ಷದ ಅಭ್ಯರ್ಥಿಗಳು 40 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 10:45 ರ ವೇಳೆ, ಬಿಜೆಪಿ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 22, ಆಮ್ ಆದ್ಮಿ ಪಕ್ಷ ಒಂದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ 900 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ. ಅವರು ಖತಿಮಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.
ಇದನ್ನೂ ಓದಿ:Results 2022:ಗೋವಾದಲ್ಲಿ ಬಿಜೆಪಿ ಮುನ್ನಡೆ, ಮಣಿಪುರದಲ್ಲಿ ಪ್ರಾದೇಶಿಕ ಪಕ್ಷವೇ ಕಿಂಗ್ ಮೇಕರ್
ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಹರೀಶ್ ರಾವತ್ ಅವರು ಈಗ 7,085 ಮತಗಳಿಂದ ಹಿನ್ನಡೆ ಅನುಭವಸಿದ್ದಾರೆ.
ಸಿತಾರ್‌ಗಂಜ್‌ನಿಂದ ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಎಎಪಿ ಅಭ್ಯರ್ಥಿ ಅಜಯ್ ಜೈಸ್ವಾಲ್ ಅವರು ಬಿಜೆಪಿ ಅಭ್ಯರ್ಥಿ ಸೌರಭ್ ಬಹುಗುಣ ಅವರಿಗಿಂತ 2,665 ಮತಗಳಿಂದ ಹಿನ್ನಡೆಯಲ್ಲಿದ್ದಾರೆ.