ನವದೆಹಲಿ:ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಹಿಮಪಾತವಾದ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿದ್ದು, ಇದರಿಂದ ಸಮಸ್ಯೆ ಎದುರಿಸುತ್ತಿರುವವರಿಗೆ ತಕ್ಷಣವೇ ಸಹಾಯ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಈ ಕುರಿಯಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರೊಂದಿಗೆ ಮಾತು ಕತೆ ನಡೆಸಲಾಗಿದ್ದು, ಪ್ರವಾಹ ಪೀಡಿತ ಜನರ ರಕ್ಷಣೆಗಾಗಿ ಎಲ್ಲಾ ರೀತಿಯ ಸಹಾಯವನ್ನು ಮಾಡುವುದಾಗಿ ಹೇಳಿದ್ದಾರೆ.
ಈಗಾಗಲೇ ಪ್ರವಾಹದಲ್ಲಿ ಸಿಕ್ಕಿ ಹಾಕಿಕೊಂಡವರನ್ನು ಕಾಪಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು (NDRF) ನಿಯೋಜಿಸಲಾಗಿದ್ದು, ಹೆಚ್ಚುವರಿ ಸೇನಾಪಡೆಯನ್ನು ದೆಹಲಿಯಿಂದ ವಿಮಾನದ ಮೂಲಕ ರವಾನಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಬಂಗಾಳದ ಹಲ್ಡಿಯಾದಲ್ಲಿ ನಡೆಯುವ ಮೋದಿಯವರ ಕಾರ್ಯಕ್ರಮಕ್ಕೆ ಮಮತಾ ಗೈರು…?
ಈ ನಡುವೆ ಸಂಬಂದಪಟ್ಟ ಎಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಲಾಗಿದೆ ಎಂದಿರುವ ಅವರು ಇನ್ನಷ್ಟು ಹೆಚ್ಚಿನ ರಕ್ಷಣಾ ಪಡೆಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗುವುದು. ‘ದೇವಭೂಮಿ’ಗೆ ಅಗತ್ಯವಿರುವ ಎಲ್ಲಾ ವಿಧವಾದ ಸಹಾಯ ಹಸ್ತವನ್ನು ಕೇಂದ್ರ ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.