Advertisement
ಆರ್ ಟಿಐ ಕಾರ್ಯಕರ್ತರೊಬ್ಬರ ಆರೋಪದ ಪ್ರಕಾರ, 2013ರ ಕೇದಾರನಾಥ ಪ್ರವಾಹ ಸಂತ್ರಸ್ತರ ನಿಧಿಯಿಂದ 47 ಲಕ್ಷ ರೂಪಾಯಿಯಷ್ಟು ಹಣವನ್ನು ಕೊಹ್ಲಿಗೆ 2015ರ ಜೂನ್ ನಲ್ಲಿ ಉತ್ತರಾಖಂಡ್ ಸರ್ಕಾರ ಪಾವತಿಸಿದೆಯಂತೆ.
ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಯಿಂದ ಕೊಹ್ಲಿಗೆ ಹಣ ಪಾವತಿಸಲಾಗಿದೆ ಎಂಬ ಆರೋಪ ಆಧಾರ ರಹಿತವಾದದ್ದು ಎಂದು ಉತ್ತರಾಖಂಡ್ ಸಿಎಂ ಮಾಧ್ಯಮ ಸಲಹೆಗಾರ ಸುರೇಂದ್ರ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ, ಎಲ್ಲವನ್ನೂ ಕಾನೂನಾತ್ಮಕವಾಗಿಯೇ ಮಾಡಲಾಗಿದೆ. ಕೇದಾರನಾಥವನ್ನು ಯಾವ ರೀತಿ ಮರು ಅಭಿವೃದ್ಧಿ ಮಾಡಲಾಗಿದೆ ಎಂಬುದು ಜನರಿಗೆ ತಿಳಿದಿದೆ. ಆದರೆ ಈ ಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ಬಿಜೆಪಿಗೆ ಮನವರಿಕೆಯಾಗಿದೆ, ಹಾಗಾಗಿ ಒತ್ತಡದಿಂದ ತಪ್ಪಿಸಿಕೊಂಡು ಜನರ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಗಿಮಿಕ್ ಮಾಡುತ್ತಿದೆ ಎಂದು ಕುಮಾರ್ ತಿರುಗೇಟು ನೀಡಿದ್ದಾರೆ.