Advertisement
ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರೇ ಉತ್ತರಾಖಂಡದಲ್ಲಿ ಕಾಂಗ್ರೆಸ್‌ನ ಪ್ರಚಾರದ ನೇತೃತ್ವ ವಹಿಸಲಿದ್ದಾರೆ.
Related Articles
Advertisement
ಮೂರೇ ತಿಂಗಳಲ್ಲಿ ಟಿಎಂಸಿಗೆ ವಿದಾಯಗೋವಾ ವಿಧಾನಸಭೆಯ 40 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲ್ಲುವ ಆಶಯವನ್ನು ತೃಣಮೂಲ ಕಾಂಗ್ರೆಸ್ ಈಗಾಗಲೇ ವ್ಯಕ್ತಪಡಿಸಿದೆ. ಈ ಹುಮ್ಮಸ್ಸಿಗೆ ಧಕ್ಕೆ ತರುವ ಬೆಳವಣಿಗೆಯಲ್ಲಿ ಮೂರು ತಿಂಗಳ ಹಿಂದೆ ಪಕ್ಷ ಸೇರಿದ್ದ ಮಾಜಿ ಶಾಸಕ ಲಾವೂ ಮಾಮ್ಲಾತ್‌ದಾರ್ ರಾಜೀನಾಮೆ ನೀಡಿದ್ದಾರೆ. ಪೋಂಡಾ ಕ್ಷೇತ್ರದ ಮಾಜಿ ಶಾಸಕರಾಗಿರುವ ಅವರು “ಗೋವಾದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ ಸಮುದಾಯದ ನಡುವೆ ಕಂದಕ ಸೃಷ್ಟಿಸಲು ಯತ್ನಿಸುತ್ತಿದೆ. ಅದು ಯೋಜನೆ ಜಾರಿ ನೆಪದಲ್ಲಿ ವಿವರಗಳನ್ನು ಸಂಗ್ರಹಿಸುತ್ತಿದೆ. ಟಿಎಂಸಿ ಜಾತ್ಯತೀತ ಪಕ್ಷವಾಗಿರಬಹುದೆಂದು ನಂಬಿದ್ದೆ’ ಎಂದು ಹೇಳಿದ್ದಾರೆ. ಇದೇ ಪಂಜಾಬ್ ಚುನಾವಣೆಗಾಗಿ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಭೇಟಿ ನೀಡಿದ ಬಳಿಕ ಪರಿಶೀಲನೆ: ಸಿಇಸಿ
ವಿಧಾನಸಭೆ ಚುನಾವಣೆ ಸಿದ್ಧತೆ ಪರಿಶೀಲಿಸುವ ನಿಟ್ಟಿನಲ್ಲಿ ಮುಂದಿನ ವಾರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮತ್ತು ಇನ್ನಿಬ್ಬರು ಚುನಾವಣಾ ಆಯುಕ್ತರು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಉ.ಪ್ರ.ವಿಧಾನಸಭೆ ಚುನಾವಣೆಯನ್ನು ಮುಂದೂಡಬಹುದು ಎಂಬ ಅಲಹಾಬಾದ್ ಹೈಕೋರ್ಟ್‌ನ ಸಲಹೆ ಪ್ರತಿಕ್ರಿಯೆ ನೀಡಿದ ಮುಖ್ಯ ಚುನಾವಣಾ ಆಯುಕ್ತರು, ಮುಂದಿನ ವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ, ವ್ಯವಸ್ಥೆ ಹಾಗೂ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಹೈಕೋರ್ಟ್ ಸಲಹೆಯನ್ನು ಪರಿಶೀಲಿಸಲಾಗುತ್ತದೆ ಎಂದು ಸುಶೀಲ್‌ಚಂದ್ರ ಹೇಳಿದ್ದಾರೆ. ಉತ್ತರಾಖಂಡದಲ್ಲಿಯೂ ಕೊರೊನಾದ ಬಗ್ಗೆ ಮಾಹಿತಿ ಪಡೆದುಕೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಡಿ.27ರಂದು ಸಭೆ:
ಹೆಚ್ಚುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳ ನಡುವೆ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಚುನಾವಣೆ ನಡೆಸುವ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.