ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದೆ. ಕಳೆದ 48 ಗಂಟೆಗಳಿಂದ ಸುರಿದ ಮಳೆಗೆ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿದೆ.
ಮುಂಜಾಗೃತ ಕ್ರಮವಾಗಿ ಯಾತ್ರಾ ಸ್ಥಳವಾದ ಬದ್ರಿನಾಥ್ ಚಾರ್ ಧಾಮ್ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉತ್ತರಾಖಂಡ ಮುಖ್ಯ ಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಂಗಳವಾರ ದೂರವಾಣಿಯಲ್ಲಿ ಮಾತನಾಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ವಿವರ ಪಡೆದುಕೊಂಡಿದ್ದಾರೆ.
“ಪ್ರಧಾನಿ ಅವರೊಂದಿಗೆ ಮಾತನಾಡಿದ್ದೇನೆ. ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ, ಸದ್ಯದ ಪರಿಸ್ಥಿತಿ ಕುರಿತು ವಿವರಿಸಿದ್ದೇನೆ. ಪರಿಸ್ಥಿತಿ ನಿಭಾಯಿಸಲು ಸದಾ ಸಿದ್ಧರಿದ್ದೇವೆ. ರಕ್ಷಣಾ ಕಾರ್ಯಾಚರಣೆಗಾಗಿ ಭಾರತೀಯ ಸೇನೆಯ ಮೂರು ಹೆಲಿಕಾಪ್ಟರ್ ಗಳನ್ನು ಸಹಾಯಕ್ಕಾಗಿ ಕೇಳಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಲಾಗಿದೆ” ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ
ಉತ್ತರಾಖಂಡ್‍ನ ನೈನಿತಾಲ್ ಜಿಲ್ಲೆಯ ಮುಕ್ತೇಶ್ವರದ ಚೌಖತಾ ಹಳ್ಳಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸೋಮವಾರ (ಅ.18) ವರೆಗೆ ಗುಡ್ಡ ಕುಸಿತ ಹಾಗೂ ಭಾರಿ ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ನೈನಿತಾಲ್ ಜಿಲ್ಲೆಯ ರಾಮ್‍ಗರ್ ಎಂಬಲ್ಲಿ ಒಂಬತ್ತು ಜನರು ನಾಪತ್ತೆಯಾದ ವರದಿ ಬಂದ ನಂತರ ಕಾರ್ಯಾಚರಣೆಗಾಗಿ ಭಾರತೀಯ ಸೇನೆಯ ಹೆಲಿಕಾಪ್ಟರ್ ನ್ನು ಕರೆಯಲಾಯಿತು.