ಡೆಹ್ರಾಡೂನ್: ನಿರ್ಮಾಣ ಹಂತದ ಸುರಂಗ ಕುಸಿದು ಅದರೊಳಗೆ ಸಿಕ್ಕಿಬಿದ್ದ ಸುಮಾರು ನಲ್ವತ್ತು ಮಂದಿಯ ರಕ್ಷಣಾ ಕಾರ್ಯಾಚರಣೆ ಸೋಮವಾರವೂ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗವೊಂದು ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಭಾಗಶಃ ಕುಸಿದಿದ್ದು, 40 ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ.
ಸುರಂಗದೊಳಗೆ ಸಿಲುಕಿರುವವರಿಗೆ ಆಹಾರ, ನೀರನ್ನು ಒದಗಿಸಲಾಗಿದೆ, ಅಲ್ಲದೆ ಸ್ಥಳದಲ್ಲಿ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಚರಣೆಯನ್ನು ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುರಂಗದ ಒಳಗೆ ಸಿಲುಕಿರುವ ಸಿಬಂದಿಗಳು ಸುರಕ್ಷಿತವಾಗಿದ್ದು ಅವರ ಜೊತೆ ಸಂವಹನ ಮಾಡಲಾಗಿದೆ ಅಲ್ಲದೆ ಅವರಿಗೆ ಅಗತ್ಯ ಬೇಕಾದ ಆಮ್ಲಜನಕ ಹಾಗೂ ಆಹಾರದ ಪೂರೈಕೆಯನ್ನು ಪೈಪ್ ಮೂಲಕ ಕಳುಹಿಸಿಕೊಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸುರಂಗದೊಳಗೆ ಕುಸಿದು ಬಿದ್ದ ಮಣ್ಣನ್ನು ಹೊರ ತೆಗೆಯುವ ಕಾರ್ಯ ಭರದಿಂದ ಸಾಗುತ್ತಿದೆ ಆದಷ್ಟು ಬೇಗ ಅವರನ್ನು ರಕ್ಷಣೆ ಮಾಡುತ್ತೇವೆ ಅಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ಅರ್ಪಣ್ ಯದುವಂಶಿ ತಿಳಿಸಿದ್ದಾರೆ.
ಇದನ್ನೂ ಓದಿ: Kaup ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ ಇನ್ನಿಲ್ಲ