ಉತ್ತರಪ್ರದೇಶ : ಬಂದಾ ಜಿಲ್ಲೆಯ ಯಮುನಾ ನದಿಯಲ್ಲಿ ಗುರುವಾರ ಸಂಭವಿಸಿದ್ದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಮತ್ತೆ ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಇದರೊಂದಿಗೆ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ಸುಮಾರು ಮೂವತ್ತು ಜನರನ್ನು ಹೊತ್ತ ದೋಣಿ ಭಾರಿ ಗಾಳಿಯ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ ಈ ವೇಳೆ ಹದಿಮೂರು ಮಂದಿ ಈಜಿ ದಡ ಸೇರಿದ್ದು ಹತ್ತಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು ಶನಿವಾರ ತಡರಾತ್ರಿ ಮೂರು ಮೃತದೇಹಗಳು ಪತ್ತೆಯಾಗಿದೆ.
ಘಟನೆ ನಡೆದ ಸ್ಥಳದಿಂದ ಸುಮಾರು 15 – 20 ಕಿಲೋ ಮೀ. ದೂರದಲ್ಲಿ ಶವಗಳು ಪತ್ತೆಯಾಗಿವೆ ಎಂದು ಕೃಷ್ಣಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದ್ದು ಮೃತ ದೇಹಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : ಸ್ವಿಫ್ಟ್ ಎಸ್-ಸಿಎನ್‌ಜಿ ಬಿಡುಗಡೆ;1 ಕೆ.ಜಿ. ಸಿಎನ್‌ಜಿಗೆ 30.90ಕಿ.ಮೀ ಮೈಲೇಜ್