Advertisement

ಅಕ್ಷರ ತಪ್ಪಾಗಿದೆ ಎಂದು ದಲಿತ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ : ಭುಗಿಲೆದ್ದ ಆಕ್ರೋಶ

09:49 AM Sep 27, 2022 | Team Udayavani |

ಲಕ್ನೋ : ದಲಿತ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ತಪ್ಪು ತಪ್ಪಾಗಿ ಬರೆದಿದ್ದಾನೆ ಎಂದು ಕೋಪಗೊಂಡು ಹಿಗ್ಗಾ ಮುಗ್ಗಾ ಥಳಿಸಿ ಗಂಭೀರ ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.

Advertisement

10 ನೇ ತರಗತಿ ವಿದ್ಯಾರ್ಥಿ ನಿಖಿತ್‌ ಕುಮಾರ್‌ ಸಾವನ್ನಪ್ಪಿದ ವಿದ್ಯಾರ್ಥಿ. ಶಾಲೆಯ ಶಿಕ್ಷಕನನ್ನು ಅಶ್ವಿನಿ ಸಿಂಗ್ ಎಂದು ಹೇಳಲಾಗಿದ್ದು,

ಘಟನೆಯ ವಿವರ : ಸೆಪ್ಟೆಂಬರ್ 7 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆದಿದ್ದು ಇದರಲ್ಲಿ ನಿಖಿತ್ ಕುಮಾರ್ ಉತ್ತರ ಪತ್ರಿಕೆಯಲ್ಲಿ ಕಾಗುಣಿತ ದೋಷ ಮಾಡಿದ್ದಾನೆ ಎಂಬ ಕಾರಣಕ್ಕಾಗಿ ಶಿಕ್ಷಕ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದಾರೆ, ಇದರಿಂದ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಟಾವಾದ ಸೈಫೈನಲ್ಲಿರುವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.

ಘಟನೆಯಿಂದ ಬಾಲಕನ ಪೋಷಕರು ಹಾಗೂ ಸಾರ್ವಜನಿಕರು ಶಿಕ್ಷಕನನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ, ಅಲ್ಲದೆ ಘಟನೆ ನಡೆದ ಬಳಿಕ ಶಿಕ್ಷಕ ನಾಪತ್ತೆಯಾಗಿದ್ದಾನೆ.

ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ :
ವಿದ್ಯಾರ್ಥಿ ಸಾವನ್ನಪ್ಪಿದ ವಿಚಾರ ಎಲ್ಲೆಡೆ ಹರಡುತ್ತಿದ್ದಂತೆ ನೂರಾರು ಮಂದಿ ಆಸ್ಪತ್ರೆ ಮುಂದೆ ಜಮಾಯಿಸಿ ಶಿಕ್ಷಣ ವಿರುದ್ಧ ಘೋಷಣೆ ಕೋಗಿ, ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ, ಶಿಕ್ಷಣ ಬಂಧನ ಆಗುವವರೆಗೆ ಮಗನ ಶವಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಬಾಲಕನ ಪೋಷಕರನ್ನು ಮನವೊಲಿಸಿ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪೋಷಕರು ಆಸ್ಪತ್ರೆಯಿಂದ ಮಗನ ಶವವನ್ನು ಊರಿಗೆ ಕೊಂಡೊಯ್ಯಲು ಒಪ್ಪಿಕೊಂಡಿದ್ದಾರೆ.

Advertisement

ಘಟನೆಗೆ ಸಂಬಂಧಿಸಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶಿಕ್ಷಕನ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ.

ಇದನ್ನೂ ಓದಿ : ಮಂಗಳೂರು : ಹತ್ತಕ್ಕೂ ಹೆಚ್ಚು ಪಿಎಫ್ಐ ನಾಯಕರು ಪೊಲೀಸರ ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next