Advertisement

ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾದ ಶಶಿಕಲಾ: ಬಿಗುಭದ್ರತೆ

12:23 PM Jan 31, 2021 | Team Udayavani |

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ, ನಂತರ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ಅವರು ಇಂದು ಬಿಡುಗಡೆಯಾಗಿದ್ದಾರೆ.

Advertisement

‘ಚಿನ್ನಮ್ಮ’ ನನ್ನು ಬರಮಾಡಿಕೊಳ್ಳಲು ಆಸ್ಪತ್ರೆಯ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಹೀಗಾಗಿ ಆಸ್ಪತ್ರೆ ಸುತ್ತಮುತ್ತ ಭಾರಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಇದೀಗ 12 ಗಂಟೆ ಸುಮಾರಿಗೆ ಶಶಿಕಲಾ ಆಸ್ಪತ್ರೆಯಿಂದ ಸೂಕ್ತ ಭದ್ರತೆಯೊಂದಿಗೆ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ:ಕೋರ್ಟ್‌ ಬಳಿ ಒಂದಾದ ನಟಿ ರಾಗಿಣಿ ಮತ್ತು ಸಂಜನಾ ಗಲ್ರಾನಿ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜಯಲಲಿತಾ, ಶಶಿಕಲಾ, ಇಳವರಸಿ ಹಾಗೂ ಸುಧಾಕರ್ ಶಿಕ್ಷೆಗೆ ಗುರಿಯಾಗಿದ್ದರು. ಶಶಿಕಲಾ 10 ಕೋಟಿ ರೂ. ದಂಡವನ್ನು ನ್ಯಾಯಾಲಯಕ್ಕೆ ಪಾವತಿಸಿದ್ದರು.

ಆದರೆ, ಶಶಿಕಲಾ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕವೂ ಇನ್ನೂ ಕೆಲ ದಿನಗಳ ಕಾಲ ಬೆಂಗಳೂರಿನಲ್ಲಿಯೇ ಉಳಿದುಕೊಳ್ಳಲು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next