ಮಂಗಳೂರು: ದಕ್ಷಿಣ ಕನ್ನಡ-ಉಡುಪಿ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯಲಿರುವ ಉಪ ಚುನಾ ವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಬಿಜೆಪಿ ಚಾಲನೆ ನೀಡಿದೆ.
ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಗುರು ವಾರ ಬಿಜೆಪಿ ಜಿಲ್ಲಾ ಕಾರ್ಯಾಲಯ ದಲ್ಲಿ ಮಹತ್ವದ ಸಭೆ ನಡೆಯಿತು. ಸಂಘಟನಾತ್ಮಕವಾಗಿ ಪಕ್ಷ ಕಾರ್ಯ ನಿರ್ವಹಿಸುವ ವಿಧಾನದ ಬಗ್ಗೆ ಚರ್ಚಿಸಲಾಯಿತು.
ಬಸವರಾಜ ಬೊಮ್ಮಾಯಿ, ಸಂಸದ ಕ್ಯಾ| ಬ್ರಿಜೇಶ್ ಚೌಟ ಹಾಗೂ ಮಾಜಿ ಶಾಸಕ ಪ್ರೀತಂಗೌಡ ಅವರನ್ನು ಚುನಾವಣೆ ಉಸ್ತುವಾರಿಯನ್ನಾಗಿ ಹೈಕಮಾಂಡ್ ನೇಮಿಸಿದೆ. ಈ ನೆಲೆಯಲ್ಲಿ ನಡೆದ ಮೊದಲ ಸಭೆ ಇದು. ಚುನಾವಣೆ ಕಣದ ಬಗ್ಗೆ ವಿಶ್ಲೇಷಣೆ ನಡೆಸಿದ ಪ್ರಮುಖರು ಬಳಿಕ ಅಭಿಪ್ರಾಯವನ್ನು ಆಲಿಸಿದರು. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಯಿತು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ.ಸುನಿಲ್ ಕುಮಾರ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ಪ್ರೀತಂ ಗೌಡ ಮತ್ತಿತರರು ಭಾಗವಹಿಸಿದ್ದರು.
“ಉಪಚುನಾವಣೆ ಹಿನ್ನೆಲೆ ಪ್ರಮುಖರ ಅಭಿಪ್ರಾಯ ಸಂಗ್ರಹಿಸಲಾ ಗಿದೆ. ಎಲ್ಲರ ಜತೆಗೆ ಚರ್ಚಿಸಿ ಒಮ್ಮತದ ಅಭ್ಯರ್ಥಿ ಬಗ್ಗೆ ನಿರ್ಧರಿಸಲಾಗುವುದು’ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.