ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಮಾಡಿದರೆ ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಉಚಿತ ಆಹಾರ, ಬಿಪಿಎಲ್ ಕಾರ್ಡ್‌ದಾರರಿಗೆ ಐದು ಸಾವಿರ ರೂ. ಆರ್ಥಿಕ ನೆರವು ಒದಗಿಸಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ನಿಂದ ತೊಂದರೆಗೊಳಗಾಗುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು.
ಲಾಕ್‌ಡೌನ್‌ಗೆ ನಮ್ಮ ವಿರೋಧವಿಲ್ಲ. ನಮ್ಮ ಸಹಕಾರವಿದೆ. ಆದರೆ, ಕಷ್ಟಕ್ಕೆ ಸಿಲುಕಿದವರಿಗೆ ಸರ್ಕಾರ ನೆರವು ನೀಡಬೇಕು. ರಾಜ್ಯದಲ್ಲಿ ಎಲ್ಲರಿಗೂ ಉಚಿತವಾಗಿ ಹಾಗೂ ಸುಲಭವಾಗಿ ಲಸಿಕೆ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅವಶ್ಯಕತೆ ಇರುವವರಿಗೆ ಹಾಸಿಗೆ ನೀಡಿ ಚಿಕಿತ್ಸೆ ದೊರಕಿಸಿಕೊಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ :ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು
ಮೂರನೇ ಅಲೆ ಕುರಿತು ಚರ್ಚೆಗಳು ನಡೆಯುತ್ತಿದ್ದು ಅದನ್ನು ತಡೆಯಲು ಈಗಲೇ ಮುನ್ನಚ್ಚರಿಕೆ ವಹಿಸಬೇಕು. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಕೋವಿಡ್ ಆಸ್ಪತ್ರೆ ತೆರೆಯಬೇಕು.ಮಹಾನಗರ ಪಾಲಿಕೆ ಇರುವ ಕಡೆ 1 ರಿಂದ 10 ಸಾವಿರ ಹಾಸಿಗೆ ಆಸ್ಪತ್ರೆ ಸಿದ್ಧವಾಗಬೇಕು ಎಂದು ಹೇಳಿದರು.