ಚಿಕ್ಕಬಳ್ಳಾಪುರ : ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಕ್ಷ ಸಂಘಟನೆಗಾಗಿ ಮತ್ತು ಚುನಾವಣೆಯಲ್ಲಿ ಗೆಲ್ಲಲು ಕೈಗೊಳ್ಳಬೇಕಾದ ತಂತ್ರಗಾರಿಕೆಯನ್ನು ಸಿದ್ದಪಡಿಸಲು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ವಿವಿಧ ಜಿಲ್ಲೆಗಳ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಗಳ ಉಸ್ತುವಾರಿಯನ್ನು ವಹಿಸಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಶಕ್ತಿಯನ್ನು ಬಳಸಿ ಚುನಾವಣೆಯನ್ನು ಗೆಲ್ಲಬೇಕೆಂದು ಸೂಚನೆಯನ್ನು ನೀಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ಮಾಜಿ ರಾಜ್ಯಸಭಾ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರು ಆಗಿರುವ ವಿ.ಎಸ್.ಉಗ್ರಪ್ಪ ಅವರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ ಕಾಂಗ್ರೆಸ್ ಪಾಳಯದಲ್ಲಿ ಸಂಘಟನಾ ಚತುರ ಎಂದು ಖ್ಯಾತಿ ಹೊಂದಿರುವ ಮಾಜಿ ರಾಜ್ಯಸಭಾ ಸದಸ್ಯ ವಿ.ಎಸ್.ಉಗ್ರಪ್ಪ ಅವರ ನೇಮಕದಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಪರಿಣಾಮಕಾರಿಯಾಗಿ ಆಗಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೂವರು ಕಾಂಗ್ರೆಸ್ ಶಾಸಕರಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾಸ್ಟರ್ ಪ್ಲಾನ್ ಮಾಡಿದ್ದು ಅದಕ್ಕಾಗಿ ವಕೀಲರು ಮತ್ತು ಅನುಭವಿ ರಾಜಕಾರಣಿ ಆಗಿರುವ ಮಾಜಿ ರಾಜ್ಯಸಭಾ ಸದಸ್ಯ ವಿ.ಎಸ್.ಉಗ್ರಪ್ಪ ಅವರಿಗೆ ಜಿಲ್ಲೆಯ ಜವಾಬ್ದಾರಿ ನೀಡಿದ್ದು ಯಾವ ರೀತಿಯಲ್ಲಿ ಉಗ್ರಪ್ಪ ಅವರು ಜವಾಬ್ದಾರಿಯನ್ನುವಹಿಸಿಕೊಂಡು ಕಾರ್ಯನಿರ್ವಹಿಸುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.