Advertisement

Job: ಖಾಲಿ ಹುದ್ದೆ ಕಾಲಮಿತಿಯಲ್ಲಿ ಭರ್ತಿ: ಸಿಎಂ

11:46 PM Dec 08, 2023 | Team Udayavani |

ಬೆಳಗಾವಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ಕ್ಕೆ ಗುರಿ ನಿಗದಿಪಡಿಸಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಮೇಲ್ಮನೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿಯ ಶಶೀಲ್‌ ನಮೋಶಿ ಪ್ರಸ್ತಾವಿಸಿದ ವಿಷಯಕ್ಕೆ ಲಿಖೀತ ಉತ್ತರ ನೀಡಿದ ಮುಖ್ಯಮಂತ್ರಿ, ಕೆಪಿಎಸ್ಸಿಯಿಂದ ವಿವಿಧ ಹುದ್ದೆಗಳ ನೇಮಕದಲ್ಲಿ ಆಗುತ್ತಿರುವ ವಿಳಂಬ ತಡೆಗಟ್ಟಲು ನೇಮಕಾತಿ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಆಯೋಗದ ಅಧಿಕಾರಿಗಳು, ನೌಕರರು ಸಾರ್ವತ್ರಿಕ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ತಾತ್ಕಾಲಿಕ ವೇಳಾಪಟ್ಟಿ ಹಾಕಿಕೊಂಡು ಗುರಿ ನಿಗದಿಪಡಿಸಲಾಗಿದೆ ಎಂದರು. ಪ್ರತಿ ನೇಮಕಾತಿ ಪ್ರಕ್ರಿಯೆಗಳಲ್ಲಿಯೂ ಅಭ್ಯರ್ಥಿಗಳು ಕಾನೂನು ಪ್ರಕರಣ ಗಳನ್ನು ದಾಖಲಿಸುತ್ತಿದ್ದಾರೆ. ಇದರಿಂದ ಕೆಲವು ಸಂದರ್ಭಗಳಲ್ಲಿ ನೇಮಕಾತಿ ವಿಳಂಬವಾಗುತ್ತಿದೆ. ಆಯೋಗವು ಅಧಿಸೂಚಿಸುವ ಕೆಲವು ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳಲ್ಲಿ ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಕಾರ್ಯ ಮಾಡಿಸಬೇಕಾಗಿದ್ದರಿಂದ ತಡವಾಗಿದೆ. ನಿಗದಿತ ಸಮಯದಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸದಿರುವುದೂ ವಿಳಂಬಕ್ಕೆ ಕಾರಣವಾಗಿದೆ ಎಂದು ಸಮಜಾಯಿಷಿ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next