Advertisement

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

09:56 AM Oct 25, 2019 | sudhir |

ಮಂಗಳೂರು: ಅರಬ್ಬೀ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ.

Advertisement

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಗ ರೆಡ್ ಅಲರ್ಟ್ ಘೋಷಿಸಿದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಸಂಪರ್ಕಿಸಬೇಕಾದ ಟೋಲ್ ಫ್ರೀ (24X7) ದೂರವಾಣಿ ಸಂಖ್ಯೆ 1077

ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪದವಿ ಪೂರ್ವ ತರಗತಿವರೆಗಿನ ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಶುಕ್ರವಾರದಂದು ಒಂದು ದಿನದ ಮಟ್ಟಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next