Advertisement
ಕೇಂದ್ರ ಸರಕಾರ ಲಾಕ್‌ಡೌನ್ ಘೋಷಣೆ ಮಾಡಿದ ಅನಂತರ ರಾಜ್ಯ ಸರಕಾರವೂ ಅಗತ್ಯ ಸೇವೆ ಒದಗಿಸುವ 9 ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳ ಬಿ, ಸಿ ಮತ್ತು ಡಿ ದರ್ಜೆಯ ನೌಕರರಿಗೆ ರಜೆ ಘೋಷಣೆ ಮಾಡಿದೆ.
ಗ್ರಾಮೀಣ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಗಿದೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕಾಗಿರುವ ಸೆಕÏನ್ ಆಫೀಸರ್, ಜೂನಿಯರ್ ಎಂಜಿನಿಯರ್ ಮತ್ತು ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್‌ಗಳಿಗೆ ರಜೆ ನೀಡಲಾಗಿದ್ದು, ಕೋವಿಡ್ 19 ಭೀತಿಯ ನಡುವೆ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರಾಮೀಣ ಜನರ ಕಷ್ಟಕ್ಕೆ ಸ್ಪಂದಿಸುವವರು ಇಲ್ಲದಂತಾಗಿದೆ.
Related Articles
ತುರ್ತು ಸೇವೆ ನಿರ್ವಹಿಸುತ್ತಿರುವ ಗ್ರಾ.ಪಂ. ಸಿಬಂದಿಯ ಜೀವ ರಕ್ಷಣೆಗೆ ಮಾಸ್ಕ್, ಸ್ಯಾನಿಟೈಸರ್ ಸಹಿತ ಆರೋಗ್ಯ ರಕ್ಷಕ ಅಗತ್ಯ ವಸ್ತುಗಳನ್ನು ನೀಡಿಲ್ಲ. ಅದಕ್ಕಿಂತ ಮುಖ್ಯವಾಗಿ ಕಾರ್ಯ ನಿರ್ವಹಿಸು ವವರಿಗೆ ವಿಮೆ ಸೌಲಭ್ಯ ಒದಗಿಸಿಲ್ಲ. ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಾಟರ್ ಮ್ಯಾನ್, ಡಾಟಾ ಆಪರೇಟರ್, ಕ್ಲರ್ಕ್, ಪಿಡಿಒ ಸಹಿತ ಕನಿಷ್ಠ 10 ಸಿಬಂದಿ ಸೇವೆ ಸಲ್ಲಿಸುತ್ತಾರೆ. ರಾಜ್ಯದಲ್ಲಿ ಸುಮಾರು 6,022 ಗ್ರಾ.ಪಂ.ಗಳಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಇಲಾಖೆ ವ್ಯಾಪ್ತಿಯಡಿಯಲ್ಲಿ ಲಕ್ಷಕ್ಕೂ ಹೆಚ್ಚು ನೌಕರರಿದ್ದಾರೆ. ಇವರೆಲ್ಲರಿಗೆ ವಿಮೆ ಸೌಲಭ್ಯ ಒದಗಿಸಬೇಕೆಂಬ ಬೇಡಿಕೆ ಪಂಚಾಯತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರದ್ದಾಗಿದೆ.
Advertisement