Advertisement
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾಕರಣದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement
ಪಪೂ ಕಾಲೇಜು ವಿಭಾಗದಲ್ಲಿ 21,405 ವಿದ್ಯಾರ್ಥಿಗಳು ಲಸಿಕಾಕರಣಕ್ಕೆ ಅರ್ಹವಿದ್ದು, 11,405 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ್ದು ಶೇ. 56ರಷ್ಟು ಪ್ರಗತಿಯಾಗಿದೆ ಎಂದು ಡಿಡಿಪಿಯು ಚಂದ್ರಕಾಂತ ಹಿಳ್ಳಿ ಮಾಹಿತಿ ನೀಡಿದರು.
ಎಲ್ಲ ಶಾಲಾ-ಕಾಲೇಜುಗಳಿಗೆ ಲಸಿಕಾಕರಣ ಸಿಬ್ಬಂದಿ ತಂಡವನ್ನು ಕಳಿಸಿ ಶೇ. ನೂರರಷ್ಟು ಗುರಿ ತಲುಪಲು ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಾಗಿ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಇಂದುಮತಿ ಪಾಟೀಲ್, ಡಾ| ಲಕ್ಷ್ಮೀಕಾಂತ ಒಂಟಿಪೀರ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಶಹಾಪುರ ತಹಶೀಲ್ದಾರ್ ಮಧುರಾಜ್, ವಡಿಗೇರಾ ತಹಶೀಲ್ದಾರ್ ಸುರೇಶ ಅಂಕಲಗಿ, ತಹಶೀಲ್ದಾರ್‌ರಾದ ಸುಬ್ಬಣ್ಣ ಜಮಖಂಡಿ, ಶರಣಬಸವ, ಅಶೋಕ ಸುರಪುಕರ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.