Advertisement

ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಲಸಿಕೆ ನೀಡಿ

04:19 PM Jan 11, 2022 | Team Udayavani |

ಯಾದಗಿರಿ: ಜಿಲ್ಲೆಯಲ್ಲಿ 15 ವರ್ಷದಿಂದ 18 ವರ್ಷದ ವಯೋಮಾನದ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಮನೆಗೆ ತೆರೆಳಿ ಕಡ್ಡಾಯವಾಗಿ ಲಸಿಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಅವರು ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾಕರಣದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾ ರೂಪಾಂತರ ತಳಿ ಒಮೈಕ್ರಾನ್‌ ವೈರಸ್‌ ಎಲ್ಲೆಡೆ ಹರಡುತ್ತಿದೆ. ಮೂರನೇ ಅಲೆ ಬರದಂತೆ ನಾವು ತಡೆಯಲು ಲಸಿಕಾಕರಣವೊಂದೇ ಅಸ್ತ್ರವಾಗಿದೆ. ಎಲ್ಲ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಜಾಗೃತ ವಹಿಸಿ, ತಪ್ಪದೇ ಲಸಿಕೆ ಹಾಕಿಸಿಕೊಳ್ಳಲು ಮನವೊಲಿಸಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕಾರ್ಯಕರ್ತರ ಮುಖಾಂತರ ಜಿಲ್ಲೆಯಲ್ಲಿ 4783 ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಲಾಗಿದೆ ಎಂದು ಇಲಾಖೆ ಉಪನಿರ್ದೇಶಕ ಪ್ರಭಾಕರ ಕವಿತಾಳ ಮಾಹಿತಿ ನೀಡಿದರು.

ಪ್ರೌಢಶಾಲೆ ವಿಭಾಗದಲ್ಲಿ 37,078 ವಿದ್ಯಾರ್ಥಿಗಳು ಲಸಿಕಾಕರಣಕ್ಕೆ ಅರ್ಹವಿದ್ದು, 19,784 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ್ದು ಶೇ. 53ರಷ್ಟು ಪ್ರಗತಿಯಾಗಿದೆ ಎಂದು ಡಿಡಿಪಿಐ ಶಾಂತಗೌಡ ಪಾಟೀಲ್‌ ಮಾಹಿತಿ ನೀಡಿದರು.

Advertisement

ಪಪೂ ಕಾಲೇಜು ವಿಭಾಗದಲ್ಲಿ 21,405 ವಿದ್ಯಾರ್ಥಿಗಳು ಲಸಿಕಾಕರಣಕ್ಕೆ ಅರ್ಹವಿದ್ದು, 11,405 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ್ದು ಶೇ. 56ರಷ್ಟು ಪ್ರಗತಿಯಾಗಿದೆ ಎಂದು ಡಿಡಿಪಿಯು ಚಂದ್ರಕಾಂತ ಹಿಳ್ಳಿ ಮಾಹಿತಿ ನೀಡಿದರು.

ಎಲ್ಲ ಶಾಲಾ-ಕಾಲೇಜುಗಳಿಗೆ ಲಸಿಕಾಕರಣ ಸಿಬ್ಬಂದಿ ತಂಡವನ್ನು ಕಳಿಸಿ ಶೇ. ನೂರರಷ್ಟು ಗುರಿ ತಲುಪಲು ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಾಗಿ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಇಂದುಮತಿ ಪಾಟೀಲ್‌, ಡಾ| ಲಕ್ಷ್ಮೀಕಾಂತ ಒಂಟಿಪೀರ, ಯಾದಗಿರಿ ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಶಹಾಪುರ ತಹಶೀಲ್ದಾರ್‌ ಮಧುರಾಜ್‌, ವಡಿಗೇರಾ ತಹಶೀಲ್ದಾರ್‌ ಸುರೇಶ ಅಂಕಲಗಿ, ತಹಶೀಲ್ದಾರ್‌ರಾದ ಸುಬ್ಬಣ್ಣ ಜಮಖಂಡಿ, ಶರಣಬಸವ, ಅಶೋಕ ಸುರಪುಕರ್‌ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next