Advertisement
ಕೆಪಿಸಿಸಿ ಕಚೇರಿಯಲ್ಲಿ ಫತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ತಿಂಗಳೊಳಗೆ ರಾಜ್ಯದ ಶೇಕಡ 80 ವಯಸ್ಕರಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಕೋವಿಡ್ ಮೂರನೇ ಅಲೆಯಿಂದ ರಾಜ್ಯದ ರಕ್ಷಣೆ ಮಾಡಬಹುದಾಗಿದೆ ಎಂದು ಹೇಳಿದರು.
Related Articles
Advertisement
ವಿದೇಶಗಳಿಗೆ ಲಸಿಕೆ ಕಳಿಸುವುದನ್ನು ತಗ್ಗಿಸಿ ನಮ್ಮ ಜನರಿಗೆ ವ್ಯಾಕ್ಸಿನೇಷನ್ ಮಾಡಲು ಒತ್ತು ಕೊಡಬೇಕು. ಬಿಜೆಪಿ ನಾಯಕರು ಲಸಿಕೆ ನೀಡಿಕೆಯಲ್ಲೂ ಅಪರ- ತಪರಾ ಮಾಡುವುದನ್ನು ನಿಲ್ಲಿಸಿ, ಎಲ್ಲರಿಗೂ ಲಸಿಕೆ ಹಾಕಿಸಿ ಜನರನ್ನು ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು” ಎಂದು ತಾಕೀತು ಮಾಡಿದರು.
”ಕೇಂದ್ರದಲ್ಲಿ ಅವರದೇ ಪಕ್ಷದ ಸರ್ಕಾರ ಇದ್ದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅವಶ್ಯಕ ಪ್ರಮಾಣದ ಲಸಿಕೆ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ವ್ಯಾಕ್ಸಿನೇಷನ್ ಬಗ್ಗೆ ಒಂದು ದಿನದ ಅಬ್ಬರದ ಪ್ರಚಾರ ಪಡೆದು ಸರ್ಕಾರ ಸುಮ್ಮನಾದರೆ ಹೇಗೆ? ಲಸಿಕೆ ಹಾಕುವ ಪ್ರಮಾಣ ಕಡಿಮೆಯಾಗಿದೆ. ಲಸಿಕೆ ಹಾಕುವಲ್ಲಿ ಉತ್ತರ ಕರ್ನಾಟಕದ ಜನರನ್ನು ಮಲತಾಯಿ ಮಕ್ಕಳಂತೆ ನೋಡಲಾಗುತ್ತಿದೆ. ಬೆಂಗಳೂರು ನಗರದಲ್ಲೂ ಲಸಿಕೆ ದಾಸ್ತಾನು ಕೊರತೆಯಿದೆ. ಜನ ಲಸಿಕೆಗಾಗಿ ಕ್ಯೂ ನಿಲ್ಲುವುದು ತಪ್ಪಿಲ್ಲ. ಅವಶ್ಯಕ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಆಗಿಲ್ಲವಾದ ಕಾರಣ ದಿಲ್ಲಿಗೆ ಹೋಗುವುದಾಗಿ ಆರೋಗ್ಯ ಸಚಿವರು ಹೇಳುತ್ತಿದ್ದಾರೆ. ಈ ಸರ್ಕಾರ ಈಗಲಾದರೂ ಎಚ್ಚೆತ್ತು ಬದ್ದತೆಯಿಂದ ಕೆಲಸ ಮಾಡುತ್ತಾ ನೋಡೋಣ” ಎಂದು ಶಿವಕುಮಾರ್ ಹೇಳಿದರು.
”ಡೆಲ್ಟಾ ರೂಪಾಂತರಿ ವೈರಾಣು ವಿರುದ್ದ ರಕ್ಷಣೆಗಾಗಿ ಕೋವಿಶೀಲ್ಡ್ 2 ನೇ ಲಸಿಕೆಯನ್ನು 8 ವಾರಗಳೊಳಗೆ ಕೊಡಬೇಕು. ಅದಕ್ಕಾಗಿ ಸರ್ಕಾರ ಮಾರ್ಗಸೂಚಿಯಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳಲಿ” ಎಂದು ಸಲಹೆ ಮಾಡಿದರು.