Advertisement

ಹೊರದೇಶದಲ್ಲಿ ಕಲಿಯಲಿರುವ ಕನ್ನಡಿಗ ವಿದ್ಯಾರ್ಥಿಗಳಿಗೆ ಮೊದಲು ಲಸಿಕೆ ನೀಡಿ: ಕುಮಾರಸ್ವಾಮಿ

04:49 PM May 29, 2021 | Team Udayavani |

ಬೆಂಗಳೂರು: ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೋವಿಡ್ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಲಸಿಕಾ ಕೇಂದ್ರಗಳನ್ನು ಬದಲಾಯಿಸಿ: ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು ಅವರು ಆಗ್ರಹಿಸಿದ್ದಾರೆ.

ವ್ಯಾಕ್ಸಿನ್ ಪಡೆಯುವ ಜಾಗದ ಪಕ್ಕದಲ್ಲೇ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಾರ್ಡ್ ಗಳಿವೆ. ಹೀಗಾಗಿ ಜನರಿಗೆ ಸೋಂಕು ತಗುಲುವ ಆತಂಕ ಎದುರಾಗಿದೆ. ಕೂಡಲೇ ಜಾರಿಗೆ ಬರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಹತ್ತಿರದ ಶಾಲಾ-ಕಾಲೇಜುಗಳು, ಸಮುದಾಯ ಭವನಗಳಿಗೆ ಬದಲಾವಣೆ ಮಾಡಬೇಕೆಂದು ಎಚ್ ಡಿಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಲಂಬಾಣಿ ತಾಂಡಾ ಜನರಿಗೆ ವಿಶೇಷ ಪ್ಯಾಕೇಜ್ ಗೆ ಎಂಎಲ್ ಸಿ ಪ್ರಕಾಶ್ ರಾಠೋಡ್ ಆಗ್ರಹ

Advertisement
Advertisement

Udayavani is now on Telegram. Click here to join our channel and stay updated with the latest news.

Next